BANGALORE NEWS : ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಎಚ್.ಎ.ಎಲ್. ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ರಾಜ್ಯಕ್ಕೆ ಆಗಮಿಸಿದ ಉಪ ರಾಷ್ಟ್ರಪತಿಯವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೂಗುಚ್ಚ ನೀಡಿ ಸ್ವಾಗತಿಸಿದರು.
ಈ ವೇಳೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಮಾಜಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ವೀರಯ್ಯ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್. ಜಿ. ಉಪಸ್ಥಿತರಿದ್ದರು.