ಯಾದಗಿರಿ :
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ನಡೆದ ಭಯೋತ್ಪಾದಕ ದಾಳಿ ಹಾಗೂ ಭಾರತೀಯ ಸೇನೆಯ ಪ್ರತೀಕಾರದ ಭಾಗವಾಗಿ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ನಡೆದ ‘ಆಪರೇಷನ್ ಸಿಂದೂರ್’ನ ನಂತರ, ದೇಶದಾದ್ಯಾಂತ ಭಾವನಾತ್ಮಕ ಭರಾಟೆಗಳು ಹೆಚ್ಚಾಗುತ್ತಿವೆ. ಈ ಹಿನ್ನಲೆಯಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಧರ್ಮ ಮತ್ತು ಜನಾಂಗಗಳ ನಡುವಿನ ತಾರತಮ್ಯವನ್ನು ಉದ್ದೀಪನಗೊಳಿಸುವ ಪೋಸ್ಟ್ಗಳು ಮತ್ತು ಘೋಷಣೆಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಇಂತಹದ್ದೇ ಘಟನೆಯೊಂದು ಕರ್ನಾಟಕದ ಯಾದಗಿರಿ ಜಿಲ್ಲೆಯಲ್ಲಿ ವರದಿಯಾಗಿದೆ. ಧರ್ಮ ಹಾಗೂ ಜನಾಂಗಗಳ ನಡುವೆ ದ್ವೇಷ ಹರಡುವ ರೀತಿಯಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಆರೋಪದ ಮೇಲೆ, ಯಾದಗಿರಿ ನಗರದ ನಿವಾಸಿ ಜಾಫರ್ ಖಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಅಪರಾಧಿ ಜಾಫರ್ ಖಾನ್, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಒಂದೇ ಒಂದು ವಿಡಿಯೋನಲ್ಲಿ, ಕಲ್ಮಾ ಪಠಣಕ್ಕೆ ಅವಮಾನವಾಗಿದೆ ಎಂಬ ಕಾರಣದಿಂದ ತನ್ನ ಆಕ್ರೋಶವನ್ನು ವ್ಯಕ್ತಪಡಿಸಿ, "ಕಲ್ಮಾಗೆ ಅವಮಾನ ಮಾಡಿದರೆ ನಾನು ಜೀವ ಕೊಡುವುದಕ್ಕೂ ಸಿದ್ಧನಿದ್ದೇನೆ. ಜೀವ ತೆಗೆಯಲೂ ಸಿದ್ಧನಿದ್ದೇನೆ" ಎಂದು ಹೇಳಿರುವ ದೃಶ್ಯಗಳು ದೃಢವಾಗಿವೆ. ಈ ವ್ಯಕ್ತಿ ಈ ವಿಡಿಯೋದಲ್ಲಿ ಸ್ಪಷ್ಟವಾಗಿ, "ನಮ್ಮವರೇ ಆದರೂ, ಬೇರೆಯವರೇ ಆದರೂ, ಪ್ರತೀಕಾರ ತೆಗೆದುಕೊಳ್ಳಿ. ಆದರೆ ಕಲ್ಮಾ ಜೊತೆ ಅಲ್ಲ" ಎಂಬ ಭಾಷೆಯಲ್ಲಿ ತಮ್ಮ ಧಾರ್ಮಿಕ ಭಾವನೆಗಳನ್ನು ಮುಂದಿಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ, ಸ್ಥಳೀಯ ನಾಗರಿಕರಲ್ಲಿ ಆತಂಕ, ಉದ್ವಿಗ್ನತೆ ಹಾಗೂ ಸಂವೇದನಾಶೀಲ ಪರಿಸ್ಥಿತಿ ಉಂಟಾಗಿದೆ.
ಬೆಂಗಳೂರಿನ ವೈಟ್ಫೀಲ್ಡ್ನಲ್ಲಿರುವ ಪಿಜಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಛತ್ತೀಸ್ಗಢ ಮೂಲದ ಶುಭಾಂಶು ಶುಕ್ಲಾ ಎಂಬ ಟೆಕ್ಕಿಯನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ಜಾಫರ್ ಖಾನ್ನ ಬಂಧನವಾಗಿದೆ.