CINEMA: ಪತಿ ದರ್ಶನ್‌ ಜೊತೆ ಡೆವಿಲ್‌ ಶೂಟಿಂಗ್‌ಗೆ ತೆರಳಿದ ವಿಜಯಲಕ್ಷ್ಮಿ

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಕಳೆದ 10 ದಿನಗಳಿಂದ ರಾಜಸ್ಥಾನದಲ್ಲಿ ಡೆವಿಲ್‌ ಚಿತ್ರದ ಚಿತ್ರೀಕರಣದಲ್ಲಿ ಬ್ಯೂಸಿಯಾಗಿದ್ದಾರೆ. ದರ್ಶನ್‌ ಪತ್ನಿ ವಿಜಯಲಕ್ಷ್ಮಿ ರಾಜಸ್ಥಾನದಲ್ಲಿ ಕ್ಲಿಕ್ಕಿಸಿಕೊಂಡ ಪೋಟೋಗಳನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಪತಿ ಜೊತೆ ವಿಜಯಲಕ್ಷ್ಮಿ ಅವರು ಕೂಡ ರಾಜಸ್ಥಾನಕ್ಕೆ ಹೋಗಿದ್ದಾರೆ ಬಿಡುವಿನ ವೇಳೆಯಲ್ಲಿ ಅಲ್ಲಿನ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ರಾಜಸ್ಥಾನದಲ್ಲಿ ಅದ್ಧೂರಿಯಾಗಿರುವ ಬಂಗಲೆವೊಂದರಲ್ಲಿ ನಿಂತು ದರ್ಶನ್ ಪತ್ನಿ ಫೋಟೋಗೆ ಪೋಸ್ ನೀಡಿದ್ದಾರೆ. ಈ ಪೋಸ್ಟ್‌ಗೆ ಈಗ ಬಗೆ ಬಗೆಯ ಕಾಮೆಂಟ್‌ಗಳು ಅರಸಿ ಬರುತ್ತಿವೆ. ಸದ್ಯ ರಾಜಸ್ಥಾನದ ಉದಯಪುರದಲ್ಲಿ ‘ಡೆವಿಲ್’ ಚಿತ್ರದ ಶೂಟಿಂಗ್ ಭರದಿಂದ ನಡೆಯುತ್ತಿದೆ. ರಾಜಸ್ಥಾನ ಶೆಡ್ಯೂಲ್ ಚಿತ್ರೀಕರಣ ಮುಗಿಸಿ ಏ.4ರಂದು ಬೆಂಗಳೂರಿಗೆ ಪತ್ನಿಯೊಂದಿಗೆ ದರ್ಶನ್ ವಾಪಸ್ಸಾಗಲಿದ್ದಾರೆ.

 

Author:

...
Sub Editor

ManyaSoft Admin

share
No Reviews