ವಿಜಯನಗರ:
ರಾಜ್ಯದಲ್ಲಿ ಸುಗ್ರೀವಾಜ್ಞೇ ಜಾರಿ ತಂದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ನಿಲ್ಲದ ಕಿರುಕುಳ, ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಹಿಳೆ ಬಲಿಯಾಗಿದ್ದಾರೆ, ವಿಜಯನಗರ ಜಿಲ್ಲೆಯ ಹಿರೇಹಡಗಲಿ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ರತ್ನಮ್ಮ ಎಂಬ ಮಹಿಳೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಮಹಿಳೆಯು ಫೈನಾನ್ಸ್ ಕಂಪನಿಯಲ್ಲಿ ಲಕ್ಷಾಂತರ ರೂ ಸಾಲ ಪಡೆದಿದ್ದರು ಎನ್ನಲಾಗಿದೆ. ಸಾಲ ಕಟ್ಟಲು ವಿಳಂಬವಾದ ಹಿನ್ನೆಲೆ ಎರಡು ದಿನದ ಹಿಂದೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಮನೆ ಮುಂದೆ ಬಂದು ಹಣ ಪಾವತಿಸುವಂತೆ ಗಲಾಟೆ ಮಾಡಿ ವಾರದೊಳಗೆ ಹಣ ಪಾವತಿಸಲು ಡೆಡ್ ಲೈನ್ ನೀಡಿದ್ದರಂತೆ, ಇದರಿಂದ ಮನನೊಂದು ಮಹಿಳೆ ಮನೆಯಲ್ಲೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಮೈಕ್ರೋ ಫೈನಾನ್ಸ್‌ನವರ ವಿರುದ್ದ ಆರೋಪಿಸುತ್ತಿದ್ದಾರೆ.