ವಿಜಯನಗರ:
ಟ್ರಾಕ್ಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದಲ್ಲಿ ನಡೆದಿದೆ.
ನಿನ್ನೆ ನಡೆದ ಈ ದುರ್ಘಟನೆಯಲ್ಲಿ ಬೈಕ್ ಸವಾರ 32 ವರ್ಷದ ಮಂಜುನಾಥ್ ಎಂಬುವರು ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಅಣಜಿಗೇರೆ ಕಡೆಯಿಂದ ಪಾದಗಟ್ಟೆ ಕಡೆ ಹೊರಟಿದ್ದ ವೇಳೆ ಎದುರಿನಿಂದ ಬಂದ ಟ್ರಾಕ್ಟರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು. ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ನಡೆದಿದೆ. ಘಟನಾ ಸ್ಥಳಕ್ಕೆ ಹರಪನಹಳ್ಳಿ ಸಿಪಿಐ ನಾಗರಾಜ್ ಮತ್ತು ಅರಸೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.