ವಿಜಯಪುರ :
ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಕಗ್ಗೋಡ ಗ್ರಾಮದ ಬಳಿಯ 52 ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ವೆಂಕು ಚವ್ಹಾಣ ಎಂಬುವರು ಮೃತ ದುರ್ದೈವಿಯಾಗಿದ್ದಾರೆ.
ಎಸ್ಎಸ್ ಎಲ್ ಸಿ ಪರೀಕ್ಷೆಗಾಗಿ ಮಕ್ಕಳನ್ನು ಇಂದು ಮುಂಜಾನೆ ಬೈಕ್ ನಲ್ಲಿ ಕರೆದುಕೊಂಡು ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ತಂದೆ ಮೃತನಾಗಿದ್ದು, ಪುತ್ರಿಯರಾದ ಐಶ್ವರ್ಯಾ, ಪ್ರೀತಿ ಹಾಗೂ ಪಕ್ಕದ ಮನೆಯ ಶ್ವೇತಾ ರಾಠೋಡ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ.