VIJAYAPURA: ಮೈಕ್ರೋ ಫೈನಾನ್ಸ್ ಅಕ್ರಮ ಬಡ್ಡಿ ದಂಧೆಕೋರರ ಮನೆಗಳ ಮೇಲೆ ವಿಜಯಪುರ ಪೊಲೀಸರ ದಾಳಿ

ವಿಜಯಪುರ :

ಜಿಲ್ಲೆಯಲ್ಲಿ ಮೈಕ್ರೋಫೈನಾನ್ಸ್  ಹಾವಳಿ ಹೆಚ್ಚಾಗಿದ್ದು, ಮೈಕ್ರೋ ಫೈನಾನ್ಸ್‌ ಹಾವಳಿಗೆ ಬೇಸತ್ತು ರಾಜ್ಯದಲ್ಲಿ ಈಗಾಗಲೇ ಹಲವರು ತಮ್ಮ ಪ್ರಾಣ ಕಳೆದುಕೊಂಡಿದ್ದು, ಕೆಲವು ಕಡೆ ಗ್ರಾಮಕ್ಕೆ ಗ್ರಾಮವೇ ಖಾಲಿಯಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಳ್ಳಂಬೆಳಿಗ್ಗೆ ಮೈಕ್ರೋ ಫೈನಾನ್ಸ್, ಅಕ್ರಮ ಬಡ್ಡಿ ದಂಧೆಕೋರರ ಮನೆ ಮೇಲೆ ವಿಜಯಪುರ ಪೊಲೀಸರ ದಾಳಿ ನಡೆಸಿ, ಬಿಸಿ ಮುಟ್ಟಿಸಿದ್ದಾರೆ. ಜಿಲ್ಲೆಯಲ್ಲಿ ಹಲವೆಡೆ ಪೋಲಿಸರು ದಾಳಿ ನಡೆಸಿದ್ದು, ದಾಳಿ ಮಾಡಿ ಅಕ್ರಮ ಹಣ, ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ.

ಕಳೆದ ಕೆಲವು ವಾರಗಳಿಂದ ವಿಜಯಪುರದಲ್ಲಿ ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದೆ. ಜೊತೆಗೆ ಬಡ್ಡಿ, ಮೀಟರ್ ಬಡ್ಡಿ ದಂಧೆಕೋರರ ಕಿರುಕುಳ ಕೂಡ ಹೆಚ್ಚಾಗಿದೆ.ಹೀಗಾಗಿ ಎಸ್ಪಿ ಲಕ್ಷ್ಮಣ ನಿಂಬರಗಿ ಆದೇಶದ ಮೇರೆಗೆ ಬೆಳ್ಳಂಬೆಳಿಗ್ಗೆ ಮನೆಗಳ ಮೇಲೆ ದಾಳಿ ನಡೆಸಿ, ಶಾಕ್ ನೀಡಿದ್ದಾರೆ.

ಮೈಕ್ರೋಫೈನಾನ್ಸ್ ಹಾಗೂ ಅಕ್ರಮ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬಡ ಜನರು ಬೇಸತ್ತು ಹೋಗಿದ್ದು, ಇದಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ವಿಜಯಪುರ ಪೋಲೀಸರು ದಾಳಿ ನಡೆಸಿದ್ದಾರೆ.

Author:

...
Reporter

ManyaSoft Admin

Ads in Post
share
No Reviews