TUMAKURU: ಸರ್ಕಾರದ ವಿರುದ್ಧ ಸಿಡಿದೆದ್ದ ವಾಟರ್‌ ಮ್ಯಾನ್‌ಗಳು

ತುಮಕೂರು: 

ತುಮಕೂರು ಮಹಾನಗರ ಪಾಲಿಕೆಯಲ್ಲಿ ನೀರು ಸರಬರಾಜು ಮಾಡ್ತಿರೋ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಾಲಿಕೆ ಆವರಣದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ. ನೇರ ನೇಮಕಾತಿ, ಖಾಲಿ ಹುದ್ದೆಗಳ ಭರ್ತಿ, ಬಾಕಿ ಪಿಎಫ್ ಬಿಡುಗಡೆ, ಗುತ್ತಿಗೆ ಪದ್ಧತಿ ರದ್ದುಪಡಿಸಿ ಸಮಾನ ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು.

ಸುಮಾರು 25 ವರ್ಷದಿಂದ ಮಹಾನಗರ ಪಾಲಿಕೆಯಲ್ಲಿ 210 ಮಂದಿ ವಾಲ್‌ ಮ್ಯಾನ್‌, ಲೀಕೇಜ್‌, ಪಂಪ್‌ಹೌಸ್‌ ಕಾರ್ಮಿಕರು ಸುಮಾರು 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಆದ್ರೆ ಇಲ್ಲಿನ ನೌಕರರಿಗೆ ಸ್ಥಿರ ಸೇವೆಯ ಭರವಸೆಯೇ ಇಲ್ಲದೇ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಿಸುತ್ತಿದ್ದೇವೆ.. ನಾವು ನೀರು ಸರಬರಾಜು ಮಾಡುವುದಲ್ಲದೇ ಕೆರೆ ಸ್ವಚ್ಛತೆ, ಕಂದಾಯ ವಸೂಲಾತಿ, ಚುನಾವಣೆ ಕಾರ್ಯ ಸೇರಿ ಅನೇಕ ಕೆಲಸಗಳನ್ನು ಮಾಡುತ್ತಿದ್ದೇವೆ. ಇದ್ರ ಪರಿಣಾಮ ನಾವು ಮಾನಸಿಕ ಒತ್ತಡ ಎದುರಿಸುತ್ತಿದ್ದೇವೆ. ಕೂಡಲೇ ನಮಗೆ ಆಗ್ತಿರೋ ಅನ್ಯಾಯವನ್ನು ಸರಿಪಡಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ರು.

ಇನ್ನು ವಿವಿಧ ಬೇಡಿಕೆಗಳ ಈಡೇರಿಕೆಗೆ 2022ರ ಏಪ್ರಿಲ್‌ನಲ್ಲೂ ಕೂಡ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗಿತ್ತು. ಅಂದು ಶಾಸಕರು, ಪಾಲಿಕೆ ಮೇಯರ್‌ ನಮ್ಮ ಬೇಡಿಕೆ ಈಡೇರಿಸಲು ಭರವಸೆ ನೀಡಿದ್ದರು. ಆದ್ರೆ ಈವರೆಗೂ ಯಾವುದೇ ಭರವಸೆ ಈಡೇರಿಸಿಲ್ಲ. ಹೀಗಾಗಿ ಈ ಬಾರಿಯ ಬಜೆಟ್‌ನಲ್ಲಿ ನೇರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಬೇಡಿಕೆ ಈಡೇರಿಸದ ಕಾರಣ ನೀರಿನ ಸರಬರಾಜು ಸ್ಥಗಿತಗೊಳಿಸಿ ಮುಷ್ಕರ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ನೀರು ಸರಬರಾಜು ಕಾರ್ಮಿಕರ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮಹಾನಗರ ಪಾಲಿಕೆ ಆಯುಕ್ತ ಅಶ್ವಿಜ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲೆಡೆ  ಎಲ್ಲಾ ಕಾರ್ಪೊರೇಷನ್ ವಾಟರ್ ಮ್ಯಾನ್ ಗಳು ಇಂದಿನಿಂದ ಮುಷ್ಕರಕ್ಕೆ ಇಳಿದಿದ್ದಾರೆ, ಅವರ ಮನವಿಯನ್ನು ಈಗಾಗಲೇ ಸರ್ಕಾರಕ್ಕೆ ಕಳಿಸಿಕೊಟ್ಟಿದ್ದೇವೆ, ಬೇಸಿಗೆಕಾಲ ಆಗಿರುವುದರಿಂದ ಜನರಿಗೆ ತೊಂದರೆ ಆಗುತ್ತದೆ, ಹೀಗಾಗಿ ಪ್ರತಿಭಟನಾಕಾರರನ್ನು  ಮನವೊಲಿಸುವಂತಹ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಬೇಸಿಗೆ ಆರಂಭವಾಗ್ತಾ ಇದ್ದು, ನೀರಿನ ಸಮಸ್ಯೆ ಹೆಚ್ಚಾಗಲಿದೆ. ಕೂಡಲೇ ಸರ್ಕಾರ ಹಾಗೂ ಮಹಾನಗರ ಪಾಲಿಕೆ ಪ್ರತಿಭಟನಾಕಾರರ ಬೇಡಿಕೆ ಈಡೇರಿಸುವ ಕೆಲಸ ಮಾಡಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಿದೆ.

Author:

...
Sub Editor

ManyaSoft Admin

share
No Reviews