ತುಮಕೂರು : ಬೆಳಗ್ಗೆಯಿಂದಲೇ ಹಲವೆಡೆ ತುಂತುರು ಮಳೆ ಶುರು, ಹವಾಮಾನ ಇಲಾಖೆ ಮುನ್ಸೂಚನೆ

Weather report : ಕರ್ನಾಟಕದಾದ್ಯಂತ ಚಳಿ ಮುಂದುವರೆದಿದ್ದು, ಅದರ ಬೆನ್ನಲ್ಲೇ ಚಂಡಮಾರುತದ ಆಗಮನವೂ ಆಗುತ್ತಿದ್ದು, ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶ್ರೀಲಂಕಾದ ಪೂರ್ವ ಕರಾವಳಿ ಹಾಗೂ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯುಂಟಾಗಿದ್ದು, ಕರ್ನಾಟಕ ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಚಳಿಯಿಂದ ತತ್ತರಿಸಿದ್ದ ಜನತೆಗೆ ಈ ಮಳೆಯು ಮತ್ತೆ ಚಳಿಯ ವಾತಾವರಣವನ್ನು ಸೃಷ್ಟಿಸಿದೆ. ತುಮಕೂರಿನಲ್ಲಿ ಬೆಳಗ್ಗೆಯಿಂದಲೇ ಮಳೆ ಶುರುವಾಗಿದೆ. ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ತುಮಕೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆ ಶುರುವಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಹಾಗೂ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆಯಲ್ಲಿ ಒಣಹವೆ ಮುಂದುವರೆಯಲಿದೆ. ಎಂದು ಹವಾಮಾನ ಇಲಾಖೆ ತಿಳಿಸಿದೆ.

Author:

...
Editor

ManyaSoft Admin

Ads in Post
share
No Reviews