HASSAN: ಪ್ರಿಯಕರನ ಜೊತೆ ಪತ್ನಿ ಪರಾರಿ..ಮನನೊಂದು ಆತ್ಮಹತ್ಯೆಗೆ ಶರಣಾದ ಪತಿ

ಮೃತ ರವಿ
ಮೃತ ರವಿ
ಹಾಸನ

ಹಾಸನ: 

ಪ್ರಿಯಕರನ ಜೊತೆ ಪತ್ನಿ ಪರಾರಿಯಾಗಿರುವ ಹಿನ್ನಲೆ ಪತಿ ರವಿ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಮಾಕವಳ್ಳಿ ಗ್ರಾಮದಲ್ಲಿ ಬಳಿ ನಡೆದಿದೆ. ಅರಕಲಗೂಡು ತಾಲೂಕಿನ ಹೊನ್ನವಳ್ಳಿ ನಿವಾಸಿ ರವಿ ಮೃತ ದುರ್ದೈವಿಯಾಗಿದ್ದಾನೆ.

ರವಿಯ ಪತ್ನಿ ಲಾವಣ್ಯ ಕೆಲ ದಿನಗಳ ಹಿಂದೆ ಗಂಡನನ್ನು ಬಿಟ್ಟು ಮಗುವಿನೊಂದಿಗೆ ಹೊನ್ನವಳ್ಳಿ ಗ್ರಾಮದ ಪ್ರದೀಪ್ ಜೊತೆ ಪರಾರಿಯಾಗಿದ್ದಳು. ಇದರಿಂದ ಮನನೊಂದ ಪತಿ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಆದರೆ ಸರಿಯಾಗಿ ಸ್ಪಂಧಿಸದ ಕಾರಣ ಎಸ್‌ಪಿಗೂ ಕೂಡ ದೂರು ನೀಡಿದ್ದರು. ಆದರೂ ಪೋಲೀಸರು ಇದರ ಬಗ್ಗೆ ಕ್ರಮ ಕೈಗೊಳ್ಳದ ಕಾರಣ ರವಿ ಮನನೊಂದು ಆತ್ಮಹತ್ಯೆಗೆ ಶರಾಣಾಗಿದ್ದಾರೆ.

ಇನ್ನು ಈ ಘಟನೆ ಹೊಳೇನರಸೀಪುರ ಪೋಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದಿಂದ ರವಿಯ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರೆಯುತ್ತಿದೆ.

 

Author:

...
Sub Editor

ManyaSoft Admin

Ads in Post
share
No Reviews