BANGALORE NEWS : ಬೆಂಗಳೂರಿನ ಎರ್ಪೋರ್ಟ್ ರಸ್ತೆಯ ಕೋಗಿಲು ಕ್ರಾಸ್ ಬಳಿ ಇಂದು ನಡೆದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ದುರ್ಘಟನೆಯಲ್ಲಿ ಜೀವ ಕಳೆದುಕೊಂಡಿದ್ದಾರೆ. ಈ ದಾರುಣ ಘಟನೆ ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
42 ವರ್ಷದ ಮಹಿಳೆ, ಬೈಕ್ನಲ್ಲಿ ಪ್ರಯಾಣಿಸುತ್ತಿದ್ದರು. ಅವರು ಚಲಿಸುತ್ತಿದ್ದಾಗ ಏಕಾಏಕಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದಾರೆ. ದುರದೃಷ್ಟವಶಾತ್, ಅದೇ ಸಮಯದಲ್ಲಿ ಹಿಂದಿನಿಂದ ಬರುತ್ತಿದ್ದ ಸಿಮೆಂಟ್ ಲಾರಿಯೊಂದು ನಿಯಂತ್ರಣ ತಪ್ಪಿ ಆಕೆಯ ಮೇಲೆ ಹರಿದು ಹೋಗಿದೆ.
ಯಲಹಂಕ ಸಂಚಾರಿ ಪೋಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂಬುದಾಗಿ ದೃಢಪಡಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.