ಶಾಸಕ ಟಿ.ಬಿ ಜಯಚಂದ್ರತುಮಕೂರು
ತುಮಕೂರು : ಶಿರಾ ತಾಲೂಕಿನ ತಾಯಿ- ಮಕ್ಕಳ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಾಮಾನ್ಯ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಸಭೆಯಲ್ಲಿ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ, ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಡಿ.ವೈ.ಎಸ್.ಪಿ ಶೇಖರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹರೀಶ್, ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಡಿ.ಎಂ.ಗೌಡ ಸೇರಿ ಮುಂತಾದವರು ಸಭೆಯಲ್ಲಿ ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಶಾಸಕ ಟಿ.ಬಿ ಜಯಚಂದ್ರ, ಆಸ್ಪತ್ರೆಯಲ್ಲಿನ ಸೇವೆಯನ್ನು ಮಾನವೀಯ ನೆಲಗಟ್ಟಿನಲ್ಲಿ ಜೀವ ಉಳಿಸುವ ಕೆಲಸವೆಂದು ಬದ್ಧತೆಯಿಂದ ಮಾಡಬೇಕು ಎಂದರು. ಸರ್ಕಾರಿ ಆಸ್ಪತ್ರೆಗಳನ್ನು ಮತ್ತಷ್ಟು ಜನಸ್ನೇಹಿಯಾಗಿಸುವ ಕೆಲಸ ಮಾಡಬೇಕು ಎಂದರು. ಹಾಗೂ ಬಡ ರೋಗಿಗಳಿಗೆ ಉತ್ತಮ ಸೌಲಭ್ಯಗಳು ಸಿಗಬೇಕು, ಈ ನಿಟ್ಟಿನಲ್ಲಿ ಸರ್ಕಾರ ಪ್ರತಿ ತಾಲೂಕು ಮತ್ತು ಜಿಲ್ಲಾಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ರಚಿಸಿ ನಾಮನಿರ್ದೇಶನ ಮಾಡಿದೆ ಎಂದು ತಿಳಿಸಿದರು. ಅಲ್ಲದೇ ಆಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಬಡ ರೋಗಿಗಳಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಹೆಚ್ಚಿನ ನಿಗಾ ವಹಿಸಬೇಕು. ಆಸ್ಪತ್ರೆಯಲ್ಲಿ ಮೂಲಸೌಲಭ್ಯಗಳ ಅಭಿವೃದ್ಧಿಗೆ ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.