WPL 2025 : ಇಂದು WPL ಫೈನಲ್‌ ಪಂದ್ಯ

ಡೆಲ್ಲಿ ಕ್ಯಾಪಿಟಲ್ಸ್‌ VS ಮುಂಬೈ ಇಂಡಿಯನ್ಸ್‌
ಡೆಲ್ಲಿ ಕ್ಯಾಪಿಟಲ್ಸ್‌ VS ಮುಂಬೈ ಇಂಡಿಯನ್ಸ್‌
ಕ್ರಿಕೆಟ್‌

ಮಹಿಳಾ ಪ್ರೀಮಿಯರ್‌ ಲೀಗ್‌ ಕೊನೆಯ ಹಂತಕ್ಕೆ ಬಂದು ನಿಂತಿದೆ. ಮಹಿಳಾ ಪ್ರೀಮಿಯರ್ ಲೀಗ್‌ನ ಫೈನಲ್ ಪಂದ್ಯ ಮಾರ್ಚ್ 15 ರಂದು ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಸತತ ಮೂರನೇ ವರ್ಷ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ. ಇತ್ತ ಮುಂಬೈ ಇಂಡಿಯನ್ಸ್ ತಂಡವು ಎಲಿಮಿನೇಟರ್ ಸುತ್ತಿನಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿ ಫೈನಲ್ ತಲುಪಿದೆ. ಈ ಮೂಲಕ ಮುಂಬೈ ಎರಡನೇ ಬಾರಿಗೆ ಫೈನಲ್ ತಲುಪಿದ ಸಾಧನೆ ಮಾಡಿದೆ.

ಈ ಎರಡೂ ತಂಡಗಳು ಎರಡನೇ ಬಾರಿಗೆ ಫೈನಲ್ ಪಂದ್ಯದಲ್ಲಿ ಪರಸ್ಪರ ಎದುರಾಗಲಿವೆ. ಇದಕ್ಕೂ ಮೊದಲು, ಮುಂಬೈ ಇಂಡಿಯನ್ಸ್ ತಂಡವು ಮೊದಲ ಸೀಸನ್​ನಲ್ಲಿ ದೆಹಲಿ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. ಇದೀಗ ಎರಡನೇ ಫೈನಲ್​ ಮುಖಾಮುಖಿಯಲ್ಲಿ ಯಾವ ತಂಡ ಗೆಲ್ಲುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡದಲ್ಲಿ ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಜೆಸ್ ಜೊನಾಸೆನ್, ಜೆಮಿಮಾ ರೊಡ್ರಿಗಸ್, ಅನ್ನಾಬೆಲ್ ಸದರ್ಲ್ಯಾಂಡ್, ಮರಿಜಾನ್ನೆ ಕಪ್, ಸಾರಾ ಬ್ರೈಸ್, ನಿಕಿ ಪ್ರಸಾದ್, ಮಿನ್ನು ಮಣಿ, ಶಿಖಾ ಪಾಂಡೆ, ಟೈಟಾಸ್ ಸಾಧು, ರಾಧಾ ಯಾದವ್, ಅರುಂಧತಿ ರೆಡ್ಡಿ, ಆಲಿಸ್ ಕ್ಯಾಪ್ಸಿ, ತಾನಿಯಾ ಭಾಟಿಯಾ, ಸ್ನೇಹ ದೀಪ್ತಿ, ನಂದಿನಿ ಕಶ್ಯಪ್, ನಲ್ಲಪುರರೆಡ್ಡಿ ಚರಣಿ ಇದ್ದಾರೆ.

ಮುಂಬೈ ಇಂಡಿಯನ್ಸ್ ಮಹಿಳಾ ತಂಡದಲ್ಲಿ  ಯಸ್ತಿಕಾ ಭಾಟಿಯಾ, ಹೇಲಿ ಮ್ಯಾಥ್ಯೂಸ್, ನ್ಯಾಟ್ ಸ್ಕಿವರ್-ಬ್ರಂಟ್, ಹರ್ಮನ್ಪ್ರೀತ್ ಕೌರ್ (ನಾಯಕಿ), ಸಜೀವನ್ ಸಜ್ನಾ, ಅಮೇಲಿಯಾ ಕೆರ್, ಅಮನ್‌ಜೋತ್ ಕೌರ್, ಜಿ ಕಮಲಿನಿ, ಸಂಸ್ಕೃತಿ ಗುಪ್ತಾ, ಶಬ್ನಿಮ್ ಇಸ್ಮಾಯಿಲ್, ಸೈಕಾ ಇಶಾಕ್, ಕ್ಲೋಯ್ ಟ್ರಯಾನ್, ನಾಡಿನ್ ಡಿ ಕ್ಲರ್ಕ್, ಕೀರ್ತನ್ ಬಾಲಕೃಷ್ಣನ್, ಜಿಂಟಿಮಣಿ ಕಲಿತಾ, ಪರುಣಿಕಾ ಸಿಸೋಡಿಯಾ, ಅಮನ್‌ದೀಪ್ ಕೌರ್, ಅಕ್ಷಿತಾ ಮಹೇಶ್ವರಿ ಇದ್ದಾರೆ.

 

 

Author:

...
Sub Editor

ManyaSoft Admin

share
No Reviews