MOVIE: ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯಕ್ಕೆ ಯಶ್​ ಭೇಟಿ

ಸಿನಿಮಾ: 

ರಾಕಿಂಗ್ ಸ್ಟಾರ್ ಯಶ್ ಅವರು ಮಧ್ಯ ಪ್ರದೇಶದ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಯಶ್ ಅವರು ಶಿವನ ಭಕ್ತರು. ಅವರ ಮನೆಯ ಕುಲದೇವರು ಕೂಡ ಶಿವನೇ. ಈ ಕಾರಣಕ್ಕೆ ಶಿವನ ದರ್ಶನ ಪಡೆಯಲು ಅವರು ಮಹಾ ಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. 

ಅದರಲ್ಲೂ ಮುಖ್ಯವಾಗಿ ಯಶ್ ರಾವಣನಾಗಿ ಮಿಂಚಲು ಸಜ್ಜಾಗಿದ್ದಾರೆ. ಈ ಮಧ್ಯೆ ಮಧ್ಯಪ್ರದೇಶದ ಉಜ್ಜಯಿನಿ ಮಹಾಕಾಳೇಶ್ವರ ದೇವಾಲಯಕ್ಕೆ ನಟ ಯಶ್​ ಭೇಟಿ ಕೊಟ್ಟಿದ್ದಾರೆ. ನಟ ಯಶ್ ಅವರಿಗೆ ದೇವರ ಮೇಲೆ ಅಪಾರ ಭಕ್ತಿ ಇದೆ. ಯಾವುದೇ ಕೆಲಸ ಶುರು ಮಾಡುವ ಮೊದಲು ದೇವರಿಗೆ ವಿಶೇಷವಾದ ಪ್ರಾರ್ಥನೆ ಸಲ್ಲಿಸುತ್ತಾರೆ. ಹೀಗಾಗಿ, ‘ರಾಮಾಯಣ’ ಸಿನಿಮಾದ ಶೂಟ್​ಗೂ ಮೊದಲು ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. 

ಇನ್ನು ನಾಳೆಯಿಂದ ರಾಮಾಯಾಣ 2 ಸಿನಿಮಾದ ಶೂಟಿಂಗ್ ಆರಂಭಗೊಳ್ಳಲಿದ್ದು,ಶೂಟಿಂಗ್ ಆರಂಭಕ್ಕೂ ಮೊದಲು ನಟ ಮಹಾಕಾಳೇಶ್ವರ ದೇವಸ್ಥಾನಕ್ಕೆ ಹೋಗಿ ವಿಶೇಷವಾಗಿ ಪೂಜೆ ಸಲ್ಲಸಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಇನ್ನು ರಾಮಾಯಣ ಚಿತ್ರದಲ್ಲಿ ಯಶ್ ರಾವಣನಾಗಿ ನಟಿಸುತ್ತಿದ್ದಾರೆ.

Author:

...
Keerthana J

Copy Editor

prajashakthi tv

share
No Reviews