RAIN ALERT: ರಾಜ್ಯದ ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ | ಇಲ್ಲಿದೆ ಹವಾಮಾನ ಇಲಾಖೆ ಮನ್ಸೂಚನೆ

ರಾಜ್ಯ: 

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗಾಳಿ ಸಹಿತ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡ ಹಿನ್ನೆಲೆಯಲ್ಲಿ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಬೀಳಲಿದೆ. ವಿವಿಧ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಏಪ್ರಿಲ್‌ 03, ಏಪ್ರಿಲ್ 04, ಏಪ್ರಿಲ್ 05ರಂದು ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗುವುದು. ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಮತ್ತು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲೂ ಮಳೆ ಬೀಳಲಿದೆ. ಈ ಭಾಗದಲ್ಲೂ ಮಳೆಯ ಮುಂಜಾಗೃತ ಕ್ರಮಗಳನ್ನ ಕೈಕೊಳ್ಳಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಬೆಂಗಳೂರಿನಲ್ಲಿ ಮಂಗಳವಾರದಿಂದ ಮೋಡಕವಿದ ವಾತಾವರಣವಿದ್ದು, ಗುರುವಾರದಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಏಪ್ರಿಲ್ 4 ಶುಕ್ರವಾರ , 5 ಶನಿವಾರ ಹಾಗೂ 6 ಭಾನುವಾರದಂದು ಭಾರಿ ಮಳೆ ಹಿನ್ನೆಲೆ ಪ್ರಮುಖ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

 

 

Author:

...
Sub Editor

ManyaSoft Admin

share
No Reviews