ಚಿಕ್ಕಬಳ್ಳಾಪುರ :
ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ.
24 ವರ್ಷದ ಭರತ್ ಎಂಬುವ ಯುವಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡು ದಿನಗಳ ಹಿಂದೆಯಷ್ಟೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.