SIRA: ಹಸುಗಳಿಗೆ ನೀರು ಕುಡಿಸಲು ಹೋಗಿ ಯುವಕ ಧಾರುಣ ಸಾವು

ಕೆರೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋಗಿ ಯುವಕ ಕೆರೆಗೆ ಬಿದ್ದು ಧಾರುಣವಾಗಿ ಸಾವನ್ನಪ್ಪಿದ್ದಾನೆ. ಈ ಘಟನೆ ಶಿರಾ ತಾಲೂಕಿನ ಬುಕ್ಕಾಪಟ್ಟಣದಲ್ಲಿ ನಿನ್ನೆ ಸಂಜೆ ನಡೆದಿದೆ. 21 ವರ್ಷದ ಮೋಹನ್‌ ಕುಮಾರ್‌ ಸಾವನ್ನಪ್ಪಿದ ದುರ್ದೈವಿಯಾಗಿದ್ದಾನೆ. ಹಸುಗಳಿಗೆ ನೀರನ್ನು ಕುಡಿಸಲು ಮೋಹನ್‌ ಕುಮಾರ್‌ ಕೆರೆ ಬಳಿ ಹೋಗಿದ್ದಾನೆ.

ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಯುವಕ ಬಿದ್ದಿದ್ದಾನೆ. ಕೆರೆಯಲ್ಲಿ ಬಿದ್ದ ಯುವಕ ಮೇಲೆ ಬರಲಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಗ್ರಾಮಸ್ಥರು ಮೃತದೇಹವನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಇನ್ನು ಈ ಸಂಬಂಧ ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ರು.

ಅಲ್ದೇ ಜನರು ಕೆರೆ- ಕಟ್ಟೆ, ಜಲಾಶಯಗಳ ಬಳಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸಲಹೆ ನೀಡಿದರು. ಬುಕ್ಕಾಪಟ್ಟಣ ಶಿರಾ ತಾಲೂಕಿಗೆ ಸೇರಿದ್ರು ಕೂಡ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸೇರಲಿದ್ದು, ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ ಸುರೇಶ್ ಬಾಬು ಸ್ಥಳಕ್ಕೆ ಭೇಟಿ ನೀಡಿ ಮೃತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ಜೊತೆಗೆ ಮುಂದಿನ ದಿನಗಳಲ್ಲಿ ಇಂತಹ ಅಪಘಾತಗಳು ಮರುಕಳಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಮುಖ್ಯ ಎಂದರು. 

Author:

share
No Reviews