Prajwal Revanna ಪೆರೋಲ್ ನೀಡಲು ಆಗಲ್ಲ – ಕಾರಾಗೃಹ ಇಲಾಖೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರಿಗೆ ಪೆರೋಲ್ ನೀಡಲು ಸಾಧ್ಯವಿಲ್ಲ ಎಂದು ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ.
ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕೈದಿಗಳಿಗೆ ಪೆರೋಲ್ ನೀಡುವ ಅಧಿಕಾರ ಕಾರಾಗೃಹ ಇಲಾಖೆಗೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜ್ವಲ್ಗೆ ಪೆರೋಲ್ ನೀಡಲು ಆಗಲ್ಲ
ಕುಟುಂಬದ ತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಜ್ವಲ್ ರೇವಣ್ಣ ಅವರನ್ನು ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ಕುಟುಂಬಸ್ಥರು ಮನವಿ ಮಾಡುವ ಪ್ರಯತ್ನ ನಡೆಸಿದ್ದರು.
ಆದರೆ ಅಧಿಕಾರ ವ್ಯಾಪ್ತಿಯ ಮಿತಿಯ ಕಾರಣದಿಂದ ಕಾರಾಗೃಹ ಇಲಾಖೆ ಅದನ್ನು ನಿರಾಕರಿಸಿದೆ.

30ನೇ ತಾರೀಖು ಪುಣ್ಯ ತಿಥಿ
ಈಗಾಗಲೇ ಕುಟುಂಬಸ್ಥರು ತಿಥಿಯ ದಿನ ಪೂಜೆ ಸಲ್ಲಿಸೋದಕ್ಕೆ ಕರೆತರುವ ಪ್ರಯತ್ನ ಮಾಡಿದ್ರು. ಕಾರಾಗೃಹ ಇಲಾಖೆ ಅಧಿಕಾರ ವ್ಯಾಪ್ತಿ ಇಲ್ಲ ಎಂದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸೋ ಪ್ಲ್ಯಾನ್ ಅಲ್ಲಿ ಇದ್ದಾರೆ.
15 ದಿನಗಳ ಕಾಲ ಪೆರೋಲ್ ಸಿಕ್ಕಿದ್ರೆ 30ನೇ ತಾರೀಖು ಪುಣ್ಯ ತಿಥಿ ಇದೆ. ಅವತ್ತಿನ ಬದಲಾಗಿ ಬೇರೊಂದು ದಿನ ಸಮಾಧಿಯ ಬಳಿ ಕರೆದುಕೊಂಡು ಹೋಗಿ ಪೂಜೆ ನೆರವೇರಿಸೋ ತಯಾರಿಯಲ್ಲಿದೆ ಕುಟುಂಬ.
ಇದನ್ನು ಓದಿ : Prajwal Revanna ವಿರುದ್ಧ ಅಪರಾಧ ಸಾಬೀತು- SIT ತಂಡಕ್ಕೆ 25 ಲಕ್ಷ ರೂ. ಬಹುಮಾನ ಘೋಷಣೆ..!

ಒಳ ಸಂದರ್ಶನಕ್ಕೆ ನ್ಯಾಯಾಲಯದ ಅನುಮತಿ
ಸಜಾ ಬಂಧಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ನೇಹಿತರೊಂದಿಗೆ ಒಳ ಸಂದರ್ಶನ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈಗಾಗಲೇ ಅನುಮತಿ ನೀಡಿದೆ.
ಜೈಲು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು
ನ್ಯಾಯಾಲಯದ ಆದೇಶದಂತೆ, ಕಾರಾಗೃಹ ನಿಯಮಾವಳಿಯ ಪ್ರಕಾರ ಕುಟುಂಬಸ್ಥರು ಹಾಗೂ ಸಂಬಂಧಿಕರಿಗೆ ಭೇಟಿ ನೀಡಲು ಅವಕಾಶ ಕಲ್ಪಿಸಬೇಕು ಎಂದು ಜೈಲು ಮುಖ್ಯ ಅಧೀಕ್ಷಕರಿಗೆ ಸೂಚಿಸಲಾಗಿದೆ.
ಭೇಟಿಯ ವೇಳೆ ಜೈಲು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದ್ದು, ಯಾವುದೇ ಕಾರಣದಿಂದ ಭೇಟಿಗೆ ಅವಕಾಶ ನಿರಾಕರಿಸಿದರೆ ಅದರ ಲಿಖಿತ ಕಾರಣವನ್ನು ಕೈದಿಗೆ ತಿಳಿಸಬೇಕು ಎಂದು ಆದೇಶಿಸಿದೆ.

ಇದನ್ನು ನೋಡಿ : DHARMENDRA PRADHAN ರಾಜೀನಾಮೆಗೆ ಆಗ್ರಹ – ತುಮಕೂರಲ್ಲಿ ಕೇಂದ್ರ ಸರ್ಕಾರದ ವಿರುದ್ಧ PROTEST



