ಪರಪ್ಪನ ಅಗ್ರಹಾರ ಜೈಲಲ್ಲಿ ಪೆನ್ ಡ್ರೈವ್, ಮೊಬೈಲ್ ಪತ್ತೆ ಹಿನ್ನಲೆ – PRAJWAL REVANNA ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್!

ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲು ಕಾರಾಗೃಹ ಮತ್ತು ಆಡಳಿತ ಸುಧಾರಣೆ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್ನಲ್ಲಿ ಮೊಬೈಲ್ ಹಾಗೂ ಪೆನ್ಡ್ರೈವ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕಾರಾಗೃಹ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.
READ THIS : ಜೈಲಿನಲ್ಲಿ Prajwal Revanna ಬಳಿ ಮತ್ತೊಂದು ಮೊಬೈಲ್ ಪತ್ತೆ!

ಹಿಂಡಲಗಾ ಜೈಲಿಗೆ ಶಿಫ್ಟ್!
ಇನ್ನು ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾರಾಗೃಹ ಇಲಾಖೆಯ ಹಿರಿಯ ಅಧಿಕಾರಿಗಳು, ಭದ್ರತಾ ದೃಷ್ಟಿಯಿಂದ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲು ಸೂಚಿಸಿಲಾಗಿದೆ.

PRAJWAL REVANNA – ಜೈಲು ಸ್ಥಳಾಂತರದ ಆದೇಶ ಚರ್ಚೆಗೆ ಕಾರಣ
ಜೈಲಿನೊಳಗೆ ನಿಷೇಧಿತ ವಿದ್ಯುನ್ಮಾನ ಉಪಕರಣಗಳು ಪತ್ತೆಯಾಗಿರುವುದು ಭದ್ರತಾ ಲೋಪವನ್ನು ಎತ್ತಿಹಿಡಿದಿದ್ದು, ಈ ಸಂಬಂಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದು, ಇದೀಗ ಅವರಿದ್ದ ಬ್ಯಾರಕ್ನಲ್ಲಿ ಮೊಬೈಲ್ ಮತ್ತು ಪೆನ್ಡ್ರೈವ್ ಪತ್ತೆಯಾದ ಪ್ರಕರಣದ ಹಿನ್ನೆಲೆಯಲ್ಲಿ ಜೈಲು ಸ್ಥಳಾಂತರದ ಆದೇಶ ಹೊರಬಂದಿರುವುದು ಚರ್ಚೆಗೆ ಕಾರಣವಾಗಿದೆ.
MUST WATCH : ತಾಲೂಕು ಕಚೇರಿಗೆ DCM ದಿಢೀರ್ ವಿಸಿಟ್ – ಓಡೋಡಿ ಬಂದ DC, ತಹಶೀಲ್ದಾರ್.!





