
SUICIDE : ದಾವಣಗೆರೆಯಲ್ಲಿ ಆನ್ಲೈನ್ ಗೇಮ್ಗಾಗಿ ಹಣಕ್ಕೆ ಸ್ನೇಹಿತರ ಕಿರುಕುಳ – ಮನನೊಂದು 13 ವರ್ಷದ ಬಾಲಕ ನೇಣಿಗೆ ಶರಣು!
ಆನ್ಲೈನ್ ಗೇಮ್ ಹುಚ್ಚು ಮತ್ತು ಸ್ನೇಹಿತರು ನೀಡಿದ ಕಿರುಕುಳಕ್ಕೆ ಬೇಸತ್ತು 13 ವರ್ಷದ ಬಾಲಕನೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು 13 ವರ್ಷದ ಮನೋಜ್ ಟಿ.ಆರ್. ಎಂದು ಗುರುತಿಸಲಾಗಿದೆ.
13 ವರ್ಷದ ಬಾಲಕ ನೇಣಿಗೆ ಶರಣು!
ಗ್ರಾಮದ ನಾಲ್ವರು ಬಾಲಕರು ಫ್ರೀ ಫೈರ್ ಆನ್ಲೈನ್ ಗೇಮ್ನಲ್ಲಿ ಹಣ ಹೂಡುವಂತೆ ಮನೋಜ್ಗೆ ನಿರಂತರವಾಗಿ ಒತ್ತಡ ಹಾಕುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮನೋಜ್ ಮನೆಯಿಂದ ಸುಮಾರು ನಾಲ್ಕು ಲಕ್ಷ ರೂಪಾಯಿ ಹಣ ತೆಗೆದುಕೊಂಡು ಅವರಿಗೆ ನೀಡಿದ್ದ ಎಂದು ಪೋಷಕರು ಆರೋಪಿಸಿದ್ದಾರೆ.
READ THIS : ವರದಕ್ಷಿಣೆ ಕಿರುಕುಳ – ಪತಿ ಕುಟುಂಬಸ್ಥರಿಂದಲೇ ಕೊಲೆಯಾದ್ಲಾ ಪತ್ನಿ?

ಹಣ ತರುವಂತೆ ಬೆದರಿಕೆ
ಮನೆಯಲ್ಲಿ ಇಟ್ಟಿದ್ದ ಹಣದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿಚಾರಿಸಿದಾಗ, ಮನೋಜ್ಗೆ ಹಣ ತರುವಂತೆ ಬೆದರಿಕೆ ಹಾಕಲಾಗುತ್ತಿದ್ದು, ಹಣಕ್ಕೆ ತರುವಂತೆ ಎಂಬ ಆರೋಪ ಕೇಳಿಬಂದಿದೆ. ಇನ್ನು ಹಣ ತರದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಮನೋಜ್ ಮೇಲೆ ಹಲ್ಲೆಯನ್ನೂ ನಡೆಸಲಾಗಿತ್ತು ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
SUICIDE – ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಈ ಕಿರುಕುಳದಿಂದ ಬಾಲಕ ತೀವ್ರ ಆತಂಕಕ್ಕೆ ಒಳಗಾಗಿದ್ದ ಎನ್ನಲಾಗಿದ್ದು, ಆದರೆ ಬಾಲಕನ ಸಾವಿಗೆ ನಿಖರ ಕಾರಣ ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಬೇಕಿದೆ. ಘಟನೆ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಣದ ವ್ಯವಹಾರ, ಬೆದರಿಕೆ ಹಾಗೂ ಹಲ್ಲೆಯ ಆರೋಪಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

MUST WATCH : ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸ್ಥಳದಲ್ಲೇ ಇಬ್ಬರು ಯುವಕರು ಸಾ*




