ಖಾಸಗಿ Bus ಅಗ್ನಿಗಾಹುತಿ – ಎಲ್ಲ ಪ್ರಯಾಣಿಕರು ಸುರಕ್ಷಿತ.

ಶಾರ್ಟ್ ಸರ್ಕ್ಯೂಟ್ನಿಂದಾಗಿ ಖಾಸಗಿ ಬಸ್ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಶಿವಮೊಗ್ಗ–ಉಡುಪಿ ಗಡಿಭಾಗದ ಹುಲಿಕಲ್ ಘಾಟ್ನಲ್ಲಿ ನಡೆದಿದೆ. ಅಗ್ನಿ ಅವಘಡದಲ್ಲಿ 17 ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿ ಉರಿದ ಬಸ್
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಹುಲಿಕಲ್ ಘಾಟ್ನಲ್ಲಿ ಈ ಅವಘಡ ಸಂಭವಿಸಿದೆ. ಉಡುಪಿಯತ್ತ ತೆರಳುತ್ತಿದ್ದ ಖಾಸಗಿ Bus ನಲ್ಲಿ ದಿಢೀರ್ ಶಾರ್ಟ್ ಸರ್ಕ್ಯೂಟ್ ಕಾಣಿಸಿಕೊಂಡಿದ್ದು, ಪ್ರಯಾಣಿಕರನ್ನ ಚಾಲಕ ಹಾಗೂ ನಿರ್ವಾಹಕ ಕೆಳಗಿಳಿಸಿದ್ದಾರೆ.
ಇದನ್ನು ಓದಿ : ಗೋವಾದಲ್ಲಿ Fire Accident – 25 ಮಂದಿ ಸಜೀವ ದಹನ

17 ಮಂದಿ ಪ್ರಯಾಣಿಕರು ಸೇಫ್
ಪ್ರಯಾಣಿಕರು ಬಸ್ನಿಂದ ಇಳಿದ ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಕವಾಗಿ ಹರಡಿದ್ದು, ನೋಡ ನೋಡುತ್ತಿದ್ದಂತೆ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನು ಈ ಘಟನೆಯಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹುಲಿಕಲ್ ಘಾಟ್ ಕುಸಿತದ ನಂತರ ಬಸ್ಗಳು ಕನೆಕ್ಟಿಂಗ್ ಆಗಿ ಕಾರ್ಯನಿರ್ವಹಿಸುತ್ತಿತ್ತು. ಹುಲಿಕಲ್ನಿಂದ ಹೊರಟ ಬಸ್ ಕೆಲವು ಕಿ.ಮೀ ಸಾಗುವಷ್ಟರಲ್ಲೇ ಅಗ್ನಿ ಅವಘಡ ಸಂಭವಿಸಿದೆ.

ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ
ಇನ್ನು ಘಟನಾ ಸ್ಥಳಕ್ಕೆ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣಗಳ ಕುರಿತು ತನಿಖೆ ಆರಂಭಿಸಿದ್ದಾರೆ. ಘಟನೆಯ ಪರಿಣಾಮ ಹುಲಿಕಲ್ ಘಾಟ್ ಮಾರ್ಗದಲ್ಲಿ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.
ಇದನ್ನು ನೋಡಿ : ಪತ್ನಿಯ ಅಕ್ರಮ ಸಂಬಂಧಕ್ಕೆ ಮಗು ಕೊ* – ಪ್ರಿಯಕರನ ಜೊತೆ ಸೇರಿ ಕೊಂ*ಳಾ ತಾಯಿ?





