
DELHI ಯಲ್ಲಿ ಭುಗಿಲೆದ್ದ ಪ್ರತಿಭಟನೆ; ಮೂವರು ಮಾಜಿ ಸಿಎಂ ಸೇರಿ 2 ಸಾವಿರಕ್ಕೂ ಹೆಚ್ಚು ಮಂದಿ ವಶಕ್ಕೆ
ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಹಮ್ಮಿಕೊಂಡಿದ್ದ ಜಂತರ್ ಮಂತರ್ ಪ್ರತಿಭಟನೆ ಶುರುವಾಗೋದಕ್ಕೆ ಮುನ್ನವೇ ಮೂವರು ಮಾಜಿ ಸಿಎಂ ಸೇರಿ 2,000ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಮಾನದಲ್ಲೇ CJP ಪ್ರಮುಖ ಮುಖಂಡರು ವಶಕ್ಕೆ
ಹೌದು.. ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂಬೈನಿಂದ ದೆಹಲಿಗೆ ಆಗಮಿಸಿದ್ದ CJP ಸಂಸ್ಥಾಪಕ ಅಭಿಜಿತ್ ದೀಪ್ಕೆ, ಮುಖಂಡರಾದ ಸೌರವ್ ದಾಸ್ ಹಾಗೂ ಅಶುತೋಷ್ ರಾಂಕಾ ಅವರನ್ನು ವಿಮಾನದಲ್ಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿಗೆ ಬಂದ ಕೆಲವೇ ಕ್ಷಣಗಳಲ್ಲಿ ನಡೆದ ಈ ಪೊಲೀಸ್ ಕಾರ್ಯಾಚರಣೆ ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ.
ಮೂವರು ಮಾಜಿ ಸಿಎಂ ವಶಕ್ಕೆ!
ಇನ್ನು ಈ ಪ್ರತಿಭಟನೆಗೆ ವಿರೋಧ ಪಕ್ಷಗಳ ಹಲವು ನಾಯಕರು ಬೆಂಬಲ ಸೂಚಿಸಿದ್ದರು. ಅರವಿಂದ್ ಕೇಜ್ರಿವಾಲ್ ಹಾಗೂ ಮಮತಾ ಬ್ಯಾನರ್ಜಿ ಸೇರಿದಂತೆ ಪ್ರಮುಖ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗಿದ್ದ ಹಲವರನ್ನು ಜಂತರ್ ಮಂತರ್ ತಲುಪುವ ಮೊದಲೇ ತಡೆದಿರುವ ಮಾಹಿತಿ ಹೊರಬಿದ್ದಿದೆ.
READ THIS : ಡಿಸಿ ಕಚೇರಿ ಮುತ್ತಿಗೆಗೆ ಯತ್ನ – ಪ್ರತಿಭಟನಾಕಾರರನ್ನ ವಶಕ್ಕೆ ಪಡೆದ ಖಾಕಿ.!

ದೆಹಲಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಇನ್ನು ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಸುರಕ್ಷತೆಯ ಕಾರಣ ನೀಡಿ ನಗರದ ಪ್ರಮುಖ ಸ್ಥಳಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹಲವು ರಸ್ತೆಗಳಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದ್ದು, ಕೆಲವು ಮೆಟ್ರೋ ನಿಲ್ದಾಣಗಳ ಪ್ರವೇಶಕ್ಕೂ ನಿರ್ಬಂಧ ವಿಧಿಸಲಾಗಿದೆ.
ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ
ಇನ್ನು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ, ಅಂದ್ರೆ SIR ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು CJP ಹಾಗೂ ವಿರೋಧ ಪಕ್ಷಗಳು ಆರೋಪಿಸಿವೆ. ಮತದಾರರ ಹೆಸರುಗಳನ್ನು ಅನ್ಯಾಯವಾಗಿ ಕೈಬಿಡಲಾಗಿದೆ ಎಂಬುದು ಪ್ರತಿಭಟನಾಕಾರರ ಆರೋಪ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಹಾಗೂ SIR ಪ್ರಕ್ರಿಯೆಯನ್ನು ಮರುಪರಿಶೀಲಿಸಬೇಕು ಎಂದು ಒತ್ತಾಯಿಸಲಾಗಿದೆ. ಆದರೆ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಯನ್ನು ನಿಯಮಾನುಸಾರ ನಡೆಸುತ್ತಿರುವುದಾಗಿ ತನ್ನ ನಿಲುವು ವ್ಯಕ್ತಪಡಿಸಿದೆ.
ದೆಹಲಿಯಲ್ಲಿ ಪ್ರತಿಭಟನೆ–ಭದ್ರತೆ ವಿಚಾರ ಚರ್ಚೆ
ಇನ್ನು ಪ್ರತಿಭಟನೆ ಆರಂಭಕ್ಕೂ ಮುನ್ನವೇ ಮುಖಂಡರನ್ನು ವಶಕ್ಕೆ ಪಡೆದಿರುವ ಕ್ರಮಕ್ಕೆ CJP ಆಕ್ಷೇಪ ವ್ಯಕ್ತಪಡಿಸಿದೆ. ಶಾಂತಿಯುತ ಪ್ರತಿಭಟನೆ ನಡೆಸುವ ಹಕ್ಕನ್ನು ನಿರ್ಬಂಧಿಸಲಾಗುತ್ತಿದೆ ಎಂಬುದು ಸಂಘಟನೆಯ ಆರೋಪ. ಮತ್ತೊಂದೆಡೆ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮ ಕೈಗೊಂಡಿರುವುದಾಗಿ ಪೊಲೀಸರು ಸಮರ್ಥಿಸಿಕೊಂಡಿದ್ದಾರೆ.

MUST WATCH : ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿ ಸಾ* – ರೈಲ್ವೆ ಹಳಿ ಮೇಲೆ ಛಿದ್ರವಾದ ದೇಹ.!




