
ದ್ವಿತೀಯ PUC 1ರ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ – ಎಕ್ಸಾಂ ಯಾವಾಗಿಂದ ಗೊತ್ತಾ?
2027ನೇ ಸಾಲಿನ ದ್ವಿತೀಯ PUC ಪರೀಕ್ಷೆ–1ಕ್ಕೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪರೀಕ್ಷೆ–1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ವೇಳಾಪಟ್ಟಿಯ ಪ್ರಕಾರ ಫೆಬ್ರವರಿ 27ರಿಂದ ಪರೀಕ್ಷೆಗಳು ಆರಂಭವಾಗಿ ಮಾರ್ಚ್ 17ರಂದು ಮುಕ್ತಾಯಗೊಳ್ಳಲಿವೆ.
ಎಕ್ಸಾಂ ಯಾವಾಗಿಂದ ಗೊತ್ತಾ?
ಇನ್ನು ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಫೆಬ್ರವರಿ 27ರಂದು ಕನ್ನಡ ಮತ್ತು ಅರೇಬಿಕ್ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಮಾರ್ಚ್ 1ರಂದು ಇಂಗ್ಲಿಷ್, ಮಾರ್ಚ್ 2ರಂದು ಪ್ರಾದೇಶಿಕ ಭಾಷೆಗಳು, ಮಾರ್ಚ್ 3ರಂದು ಭೂಗೋಳಶಾಸ್ತ್ರ ಹಾಗೂ ಮನಃಶಾಸ್ತ್ರ ಪರೀಕ್ಷೆಗಳು ನಿಗದಿಯಾಗಿವೆ.

ಮಾರ್ಚ್ 4ರಂದು ಭೌತಶಾಸ್ತ್ರ ಹಾಗೂ ಸಮಾಜಶಾಸ್ತ್ರ ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್ 5ರಂದು ಲೆಕ್ಕಶಾಸ್ತ್ರ ಪರೀಕ್ಷೆ ನಿಗದಿಯಾಗಿದೆ.
ಮಾರ್ಚ್ 8ರಂದು ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ ಮತ್ತು ಮೂಲ ಗಣಿತ, ಮಾರ್ಚ್ 9ರಂದು ಅರ್ಥಶಾಸ್ತ್ರ ಹಾಗೂ ಭೂಗರ್ಭಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
READ THIS : KSET-2026 ಪರೀಕ್ಷೆಗೆ ಅಧಿಸೂಚನೆ ಪ್ರಕಟ – ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಶುರು
ಇನ್ನು ಮಾರ್ಚ್ 11ರಂದು ಹಿಂದೂಸ್ತಾನಿ ಸಂಗೀತ ಹಾಗೂ ವೃತ್ತಿಪರ ವಿಷಯಗಳು, ಮಾರ್ಚ್ 12ರಂದು ಗಣಿತ ಮತ್ತು ವ್ಯವಹಾರ ಅಧ್ಯಯನ, ಮಾರ್ಚ್ 13ರಂದು ಐಚ್ಛಿಕ ಕನ್ನಡ, ತರ್ಕಶಾಸ್ತ್ರ ಹಾಗೂ ಗೃಹವಿಜ್ಞಾನ ಪರೀಕ್ಷೆಗಳು ನಡೆಯಲಿವೆ. ಮಾರ್ಚ್ 15ರಂದು ಜೀವಶಾಸ್ತ್ರ, ರಾಜ್ಯಶಾಸ್ತ್ರ ಹಾಗೂ ಗಣಕಶಾಸ್ತ್ರ ಪರೀಕ್ಷೆಗಳು ನಿಗದಿಯಾಗಿವೆ.

ಮಾರ್ಚ್ 16ರಂದು ಇತಿಹಾಸ, ಸಂಖ್ಯಾಶಾಸ್ತ್ರ ಹಾಗೂ ವಿದ್ಯುನ್ಮಾನಶಾಸ್ತ್ರ ಪರೀಕ್ಷೆಗಳು ನಡೆಯಲಿದೆ.
ಮಾರ್ಚ್ 17ರಂದು ಹಿಂದಿ ಪರೀಕ್ಷೆಯೊಂದಿಗೆ ದ್ವಿತೀಯ ಪಿಯುಸಿ ಪರೀಕ್ಷೆ–1 ಮುಕ್ತಾಯಗೊಳ್ಳಲಿದೆ ಎಂದು ತಾತ್ಕಾಲಿಕ ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ.
ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಪರೀಕ್ಷೆ
ಬಹುತೇಕ ವಿಷಯಗಳ ಪರೀಕ್ಷೆಗಳು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿವೆ. ಹಿಂದೂಸ್ತಾನಿ ಸಂಗೀತ ಹಾಗೂ ಕೆಲವು ವೃತ್ತಿಪರ ವಿಷಯಗಳಿಗೆ ಪರೀಕ್ಷಾ ಅವಧಿಯಲ್ಲಿ ವ್ಯತ್ಯಾಸವಿರಲಿದೆ.
ಇನ್ನು ಇದು ತಾತ್ಕಾಲಿಕ ವೇಳಾಪಟ್ಟಿಯಾಗಿದ್ದು, ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಹೀಗಾಗಿ ವಿದ್ಯಾರ್ಥಿಗಳು ಅಂತಿಮ ವೇಳಾಪಟ್ಟಿಯನ್ನು ಪರಿಶೀಲಿಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬೇಕಿದೆ.

MUST WATCH : ಕಳ್ಳ ಜ್ಞಾನೇಶ್ ಕುಮಾರ್ ಹೋದ್ರೆ ಇನ್ನೊಬ್ಬ ಅಜ್ಞಾನೇಶ್ ಕುಮಾರ್ ಬರ್ತಾನೆ




