ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ, ಹೊನ್ನಾವರ ಮಂಕಿ ಪೊಲೀಸ್ ಠಾಣೆ PSI ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಮಂಕಿ ಪೊಲೀಸ್ ಠಾಣೆಯ ಪಿಎಸ್ಐ ಅಭಿನಂದನ್ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೋಕ್ಸೋ (POCSO) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ
ಪೊಲೀಸ್ ಮೂಲಗಳ ಪ್ರಕಾರ, ಯಲ್ಲಾಪುರ ಮೂಲದ ಅಪ್ರಾಪ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೂರಿನಲ್ಲಿ PSI ಅಭಿನಂದನ್ ಅವರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಮಾಡಲಾಗಿದೆ.
ಇದನ್ನು ಓದಿ : ಮಹಿಳೆಯ ಅತ್ಯಾಚಾರವೆಸಗಿ ಕೊಲೆಗೈದು ತಾನೂ ಸತ್ತ ವ್ಯಕ್ತಿ!

PSI ಅಭಿನಂದನ್ ಅರೆಸ್ಟ್ !
ದೂರು ದಾಖಲಾದ ತಕ್ಷಣವೇ ಭಟ್ಕಳ ನಗರ ಠಾಣೆ ಪೊಲೀಸರು ಆರೋಪಿಯಾಗಿರುವ ಪಿಎಸ್ಐ ಅಭಿನಂದನ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ರಕ್ಷಣೆ ಕೊಡಬೇಕಿದ್ದ ಪೊಲೀಸರೇ ರಾಕ್ಷಸರಾಗಿ ವರ್ತನೆ
ಬೇಲಿಯೇ ಎದ್ದು ಹೊಲ ಮೇಯ್ತು ಎನ್ನುವಂತೆ ರಕ್ಷಣೆ ಕೊಡಬೇಕಿದ್ದ ಪೊಲೀಸರೇ ರಾಕ್ಷಸರಾಗಿ ವರ್ತಿಸಿದ್ರೆ ಹೇಗೆ ಅಂತ ಸಾರ್ವಜನಿಕರು ಬೇಸರ ಹೊರಹಾಕಿದ್ದಾರೆ. ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇದನ್ನು ನೋಡಿ : ಭೀಕರ ಅಪಘಾತಕ್ಕೀಡಾದ ವಿಎ ಭುವನಾ – ನಡುರಸ್ತೆಯಲ್ಲೇ ಹೇಗೆ ಒದ್ದಾಡಿದ್ರು ನೋಡಿ




