Kalaburagi ಯ ಡಿಸಿಆರ್ಬಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಬಸವರಾಜ್ ಹೆರೂರ್ ಮೃತಪಟ್ಟಿರುವ ಘಟನೆ ನಡೆದಿದೆ.

Kalaburagi ಯಲ್ಲಿ ಪೊಲೀಸ್ ಇಲಾಖೆಗೆ ಆಘಾತಕಾರಿ ಬೆಳವಣಿಗೆಯೊಂದು ನಡೆದಿದ್ದು, ಡಿಸಿಆರ್ಬಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಬಸವರಾಜ್ ಹೆರೂರ್ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಈ ಘಟನೆ ನಗರದ ಗಂಗಾ ನಗರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ನಡೆದಿದೆ.
ಮೃತರನ್ನು ಬಸವರಾಜ್ ಹೆರೂರ್ ಎಂದು ಗುರುತಿಸಲಾಗಿದೆ. ಅವರು 2014ರ ಬ್ಯಾಚ್ನ ಪಿಎಸ್ಐ ಆಗಿದ್ದು, ಕಳೆದ ಎರಡು ವರ್ಷಗಳಿಂದ ಕಲಬುರಗಿಯ ಡಿಸಿಆರ್ಬಿ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.
MUST READ : ಲಿವ್ ಇನ್ ಗೆಳತಿಯ ಕತ್ತು ಹಿಸುಕಿ ಕೊಂದ ಪ್ರಿಯಕರ!
ಘಟನೆ ಹೇಗೆ ಬೆಳಕಿಗೆ ಬಂತು?
ಮಂಗಳವಾರ ತಡರಾತ್ರಿ ಬಸವರಾಜ್ ಅವರು ತಮ್ಮ ಆಪ್ತರಿಗೆ ಕರೆ ಮಾಡಿದ್ದು, ಇದರಿಂದ ಆತಂಕಗೊಂಡ ಸ್ನೇಹಿತರು ಅವರ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಕುಟುಂಬದವರು ಮನೆಗೆ ತೆರಳಿದಾಗ ಅವರು ಮೃತಪಟ್ಟಿರುವುದು ಗೊತ್ತಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಆರ್.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.
MUST WATCH : ನಿರ್ಮಾಣ ಹಂತದ ಕ್ರೀಡಾಂಗಣದಲ್ಲಿ ದುರಂತ ಲಿಫ್ಟ್ ನ ಗುಂಡಿಗೆ ಬಿದ್ದು ಪುಟ್ಟ ಕಂದಮ್ಮ ಸಾ**




