ರಾಜ್ಯದ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಕರ್ನಾಟಕ ಸರ್ಕಾರ ‘ಪ್ರಜಾ ಸೇವೆ’ ಎಂಬ ಹೊಸ ಇಲಾಖೆಯನ್ನು ಸ್ಥಾಪಿಸಿದೆ- DK Shivakumar

ರಾಜ್ಯದ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಶೀಘ್ರ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಪ್ರಜಾ ಸೇವೆ’ ಎಂಬ ಹೊಸ ಇಲಾಖೆಯನ್ನು ಸ್ಥಾಪಿಸಲು ತೀರ್ಮಾನಿಸಿದೆ.
ಈ ಇಲಾಖೆಗೆ ಪ್ರತ್ಯೇಕ ಸಚಿವರನ್ನೂ ನೇಮಕ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ DK Shivakumar ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ಇಂದಿನ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಡಿಕೆ ಶಿವಕುಮಾರ್ ಈ ಮಾಹಿತಿಯನ್ನು ಹಂಚಿಕೊಂಡರು.
ಈ ವೇಳೆ ಸಚಿವರಾದ ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ ಹಾಗೂ ಯು.ಟಿ. ಖಾದರ್ ಉಪಸ್ಥಿತರಿದ್ದರು.

ಜನರ ಅರ್ಜಿಗಳಿಗೆ ಒಂದೇ ವೇದಿಕೆ
ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಉದ್ದೇಶದಿಂದ ‘ಪ್ರಜಾ ಸೇವೆ’ ಇಲಾಖೆಯನ್ನು ರಚಿಸಲಾಗುತ್ತಿದೆ. ಯಾವುದೇ ಸಚಿವರಿಗೆ ಸಲ್ಲಿಕೆಯಾಗುವ ಸಾರ್ವಜನಿಕ ಅರ್ಜಿಗಳನ್ನು ಈ ಇಲಾಖೆಯ ಮೂಲಕ ಪರಿಶೀಲಿಸಿ,
ಸಂಬಂಧಿತ ಅಧಿಕಾರಿಗಳ ಮೂಲಕ ಪರಿಹಾರ ಕಲ್ಪಿಸಲಾಗುತ್ತದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
MUST READ : ರುಕ್ಮಿಣಿ ವಸಂತ್ ಬಿಕಿನಿ ಫೋಟೋ ಹರಿಬಿಟ್ಟ ಮೂವರು ಅರೆಸ್ಟ್!
ಐಎಎಸ್ ಅಧಿಕಾರಿಗಳಿಂದ ಮೇಲ್ವಿಚಾರಣೆ
ಹೊಸ ಇಲಾಖೆಯಲ್ಲಿ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರಿಂದ ಬರುವ ಅರ್ಜಿಗಳ ಪರಿಶೀಲನೆ ಹಾಗೂ ಅವುಗಳ ವಿಲೇವಾರಿಯ ಜವಾಬ್ದಾರಿ ವಹಿಸಲಿದ್ದಾರೆ.
ಇದರಿಂದ ಆಡಳಿತ ವ್ಯವಸ್ಥೆ ಮತ್ತಷ್ಟು ಪರಿಣಾಮಕಾರಿಯಾಗಲಿದೆ ಎಂದು ಸರ್ಕಾರ ನಿರೀಕ್ಷಿಸಿದೆ.

224 ಕ್ಷೇತ್ರಗಳಲ್ಲಿ ಜನಸ್ಪಂದನಾ ಸಭೆ
ರಾಜ್ಯದ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು 224 ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಜನಸ್ಪಂದನಾ ಸಭೆಗಳನ್ನು ನಡೆಸಬೇಕು ಎಂದು ಸೂಚಿಸಲಾಗಿದೆ. ವಾರಕ್ಕೆ ಕನಿಷ್ಠ ಒಂದು ದಿನ ಸ್ಥಳೀಯ ಶಾಸಕರೊಂದಿಗೆ ಸಭೆ ನಡೆಸಿ, ಜನರ ಅಹವಾಲುಗಳನ್ನು ಸ್ವೀಕರಿಸಿ ಪರಿಹಾರ ಕ್ರಮ ಕೈಗೊಳ್ಳಲಾಗುತ್ತದೆ.

ಜನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಗುರಿ
‘ಪ್ರಜಾ ಸೇವೆ’ ಇಲಾಖೆಯ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ನ್ಯಾಯ ಒದಗಿಸುವುದು ಹಾಗೂ ಆಡಳಿತವನ್ನು ಜನಸ್ನೇಹಿಯಾಗಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
MUST WATCH : ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಚಿಕಿತ್ಸೆಗಾಗಿ ಬಡ ರೋಗಿಗಳ ಪರದಾಟ | SIRA NEWS |




