ಚಾಕು ಇರಿದು ಯುವಕನ ಬರ್ಬರ Murder!

ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೃತರನ್ನು ಉಂಡೇಟಿ ಶ್ರೀನಾಥ್ (23) ಎಂದು ಗುರುತಿಸಲಾಗಿದೆ. ಅವರು ಡೆಕೊರೇಷನ್ ಸಂಬಂಧಿತ ಕೆಲಸ ಮಾಡುತ್ತಿದ್ದರು.
ಆಗಿದ್ದೇನು..?
ಆಗಸ್ಟ್ 13ರಂದು ರಾತ್ರಿ ಸುಮಾರು 10.30ರ ವೇಳೆಗೆ ಶ್ರೀನಾಥ್ ತಮ್ಮ ಸ್ನೇಹಿತ ವೀರೇಶ್ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ ವೆಮುಲ ಮಧು (28) ತನ್ನ ಸಾಕು ನಾಯಿಯನ್ನು ವಾಕಿಂಗ್ಗೆ ಕರೆದುಕೊಂಡು ಬಂದಿದ್ದ.
ಇದನ್ನು ಓದಿ : ಮನೆಯಲ್ಲೇ ಹೆಣವಾದ್ರು ತಂದೆ-ಮಗ : ಕೊಲೆ ಶಂಕೆ!

ಈ ವೇಳೆ ನಾಯಿ, ಶ್ರೀನಾಥ್ ಹಾಗೂ ವೀರೇಶ್ ಕುಳಿತಿದ್ದ ಆಟೋ ಸಮೀಪ ಮೂತ್ರ ವಿಸರ್ಜನೆ ಮಾಡಿದ್ದಲ್ಲದೆ, ಅವರಿಗೆ ಬೊಗಳಿದೆ ಎನ್ನಲಾಗಿದೆ. ಇದನ್ನು ಪ್ರಶ್ನಿಸಿದ ಶ್ರೀನಾಥ್, ಮಧು ಜೊತೆ ಮಾತಿನ ಚಕಮಕಿಗೆ ಇಳಿದಿದ್ದಾರೆ. ಬಳಿಕ ಇಬ್ಬರ ನಡುವಿನ ವಾಗ್ವಾದ ತೀವ್ರಗೊಂಡಿದ್ದು, ಶ್ರೀನಾಥ್ ಹಾಗೂ ವೀರೇಶ್ ಮಧುವಿನ ಮನೆ ಕಡೆಗೆ ತೆರಳಿದ್ದಾರೆ.
ಆರೋಪಿ ಸ್ಥಳದಿಂದ ಪರಾರಿ
ಅಲ್ಲಿ ಜಗಳ ವಿಕೋಪಕ್ಕೆ ತಿರುಗಿ ಇಬ್ಬರ ನಡುವೆ ದೊಣ್ಣೆಗಳಿಂದ ಹೊಡೆದಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಲಾಟೆ ವೇಳೆ ಮಧು ಮನೆಯೊಳಗೆ ತೆರಳಿ ತರಕಾರಿ ಕತ್ತರಿಸಲು ಬಳಸುವ ಚಾಕು ತಂದು ಶ್ರೀನಾಥ್ಗೆ ಹಲವು ಬಾರಿ ಇರಿದಿದ್ದಾನೆ. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ಶ್ರೀನಾಥ್ ತೀವ್ರ ರಕ್ತಸ್ರಾವಕ್ಕೊಳಗಾಗಿ ಮನೆಯ ಸಮೀಪದ ಚರಂಡಿ ಬಳಿ ಕುಸಿದು ಬಿದ್ದಿದ್ದಾನೆ. ಬಳಿಕ ಮಧು ಸ್ಥಳದಿಂದ ಪರಾರಿಯಾಗಿದ್ದಾನೆ.

ಆರೋಪಿ ಬಂಧನ – ತನಿಖೆ ಆರಂಭ
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಘಟನಾ ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವೆಮುಲ ಮಧುವನ್ನು ಬಂಧಿಸಲಾಗಿದ್ದು, ಘಟನೆಗೆ ನಿಖರ ಕಾರಣ ಹಾಗೂ ಪ್ರಕರಣದ ಇತರ ಅಂಶಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನು ನೋಡಿ : ಒಂಚೂರು ಯಾಮಾರಿದ್ರೂ ಅಪಾಯ – ಗುಂಡಿ ಕಾಣದೇ ಸವಾರರ ಪರದಾಟ




