Raichur ಜಿಲ್ಲೆಯ ಸಿಂಧನೂರಿನಲ್ಲಿ ಮಹೀಂದ್ರಾ ಥಾರ್ ವಾಹನ ವಿದ್ಯಾರ್ಥಿನಿಯರ ಮೇಲೆ ಹರಿದ ಪರಿಣಾಮ 17 ವರ್ಷದ ವಿದ್ಯಾರ್ಥಿನಿ ಭೂಮಿಕಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ..

Raichur ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಈ ದುರ್ಘಟನೆ ಮಹೀಂದ್ರಾ ಥಾರ್ ವಾಹನದ ಚಾಲಕನ ಅಜಾಗರೂಕತೆಯಿಂದ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮೃತ ವಿದ್ಯಾರ್ಥಿನಿಯ ಗುರುತು ಪತ್ತೆ
ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿನಿಯನ್ನು ಭೂಮಿಕಾ (17) ಎಂದು ಗುರುತಿಸಲಾಗಿದೆ. ಇವರು ಅರಗಿನಮರ ಕ್ಯಾಂಪ್ ನಿವಾಸಿಯಾಗಿದ್ದರು.
ಗಾಯಗೊಂಡ ವಿದ್ಯಾರ್ಥಿನಿಯರನ್ನು ಮೇಘನಾ, ಮಹೇಶ್ವರಿ ಮತ್ತು ಜಹೀದಾ ಎಂದು ಗುರುತಿಸಲಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
MUST READ : Mangaluru : ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು..!!

ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವೇಳೆ ದುರಂತ
ಮಾಹಿತಿಯ ಪ್ರಕಾರ, ಕಾಲೇಜು ಮುಗಿಸಿಕೊಂಡು ವಿದ್ಯಾರ್ಥಿನಿಯರು ಮನೆಗೆ ತೆರಳುತ್ತಿದ್ದರು.ಈ ವೇಳೆ ವಾಹನ ಚಾಲಕ ರಿವರ್ಸ್ ತೆಗೆದುಕೊಳ್ಳುವಾಗ ನಿಯಂತ್ರಣ ತಪ್ಪಿ ವಿದ್ಯಾರ್ಥಿನಿಯರ ಮೇಲೆ ವಾಹನ ಹರಿದಿದೆ.
ಘಟನೆಯಲ್ಲಿ ಭೂಮಿಕಾ ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಿಸಿಟಿವಿಯಲ್ಲಿ ಸೆರೆಯಾದ ಅಪಘಾತ ದೃಶ್ಯ
ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಘಟನೆ ಸಂಬಂಧ Sindhanur Traffic Police Station ಪೊಲೀಸರು ವಾಹನ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
MUST WATCH : ಸರ್ಕಾರಿ ವೈದ್ಯರ ವಿರುದ್ಧ ಅಪಪ್ರಚಾರ – ಗ್ರಾಮಸ್ಥರಿಂದ ವೈದ್ಯರ ಪರ ಪ್ರತಿಭಟನೆ..! | MADHUGIRI NEWS |




