Raichur ಜಿಲ್ಲೆಯ ಮಸ್ಕಿ ತಾಲೂಕಿನ ಮೆದಿಕಿನಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿದ್ದ 29 ವರ್ಷದ ವೀರನಗೌಡ ಪಾಟೀಲ್ ಎದೆನೋವಿನಿಂದ ಕುಸಿದು ಬಿದ್ದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

Raichur ಜಿಲ್ಲೆಯ ಮಸ್ಕಿ ತಾಲೂಕಿನ ಮೆದಿಕಿನಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿದ್ದ 29 ವರ್ಷದ ಯುವ ಶಿಕ್ಷಕರೊಬ್ಬರು ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಈ ಘಟನೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ತೀವ್ರ ದುಃಖ ಮೂಡಿಸಿದೆ.

ಊಟದ ಬಳಿಕ ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ ಅಸ್ವಸ್ಥ
ಮೃತ ಶಿಕ್ಷಕರನ್ನು ವೀರನಗೌಡ ಪಾಟೀಲ್ (29) ಎಂದು ಗುರುತಿಸಲಾಗಿದೆ. ಅವರು ನಾಗರಬೆಂಚಿ ಗ್ರಾಮದ ನಿವಾಸಿಯಾಗಿದ್ದು, ಮೆದಿಕಿನಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
MUST READ : Koppal ಭೀಕರ ರಸ್ತೆ ಅಪಘಾತ – ಮಂತ್ರಾಲಯಕ್ಕೆ ತೆರಳುತ್ತಿದ್ದ ಐವರು ದುರ್ಮರಣ..!!
ಊಟದ ವಿರಾಮದ ಬಳಿಕ ವಿದ್ಯಾರ್ಥಿಗಳೊಂದಿಗೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಅವರು ಕುಸಿದು ಬಿದ್ದಿದ್ದಾರೆ.

ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಸಾವು
ಸಹ ಶಿಕ್ಷಕರು ಹಾಗೂ ಸ್ಥಳೀಯರು ತಕ್ಷಣವೇ ಅವರನ್ನು ಮಸ್ಕಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದರು. ಆದರೆ ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿಗಳು ಮತ್ತು ಸಹ ಶಿಕ್ಷಕರಲ್ಲಿ ಶೋಕ
ಕೇವಲ 29ನೇ ವಯಸ್ಸಿನಲ್ಲೇ ಶಿಕ್ಷಕರ ಅಕಾಲಿಕ ನಿಧನ ಶಾಲಾ ವಾತಾವರಣದಲ್ಲಿ ದುಃಖದ ಛಾಯೆ ಮೂಡಿಸಿದೆ. ವಿದ್ಯಾರ್ಥಿಗಳು, ಸಹ ಶಿಕ್ಷಕರು ಹಾಗೂ ಗ್ರಾಮಸ್ಥರು ವೀರನಗೌಡ ಪಾಟೀಲ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
MUST WATCH : 2028ಕ್ಕೆ ಮೈತ್ರಿ ಸರ್ಕಾರ ಫಿಕ್ಸ್ ಹೆಚ್ಡಿಕೆನೇ ಮುಂದಿನ ಸಿಎಂ ಎಂದ ನಿಂಗಪ್ಪ




