Raichur ಗಡಿ ತೆಲಂಗಾಣದ ಗುಡೆಬಲ್ಲೂರು ಗ್ರಾಮದ ಬಳಿ ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಉಪನ್ಯಾಸಕ ಶೇಖರಪ್ಪ ಗೌಡ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.

Raichur ಗಡಿ ಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಉಪನ್ಯಾಸಕರೊಬ್ಬರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಈ ದುರ್ಘಟನೆ ತೆಲಂಗಾಣದ ಗುಡೆಬಲ್ಲೂರು ಗ್ರಾಮದ ಸಮೀಪ ನಡೆದಿದ್ದು, ಗಾಯಾಳುಗಳನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
MUST READ : ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತ

ಅಪಘಾತದಲ್ಲಿ ರಾಯಚೂರಿನ ನಿವೃತ್ತ ಉಪನ್ಯಾಸಕರಾದ ಶೇಖರಪ್ಪ ಗೌಡ (70) ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಟುಂಬ ಸದಸ್ಯರು ಯಾದಗಿರಿ ಜಿಲ್ಲೆಯ ಕಾಳಬೆಳಗುಂದಿ ಬನದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಮುಗಿಸಿ ರಾಯಚೂರಿಗೆ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ರಸ್ತೆಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಐವರನ್ನು ತಕ್ಷಣವೇ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಘಟನೆ ಕುರಿತು ಕೃಷ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದೇವರ ದರ್ಶನ ಮುಗಿಸಿ ಮನೆಗೆ ಮರಳುತ್ತಿದ್ದ ಕುಟುಂಬದ ಮೇಲೆ ಸಂಭವಿಸಿದ ಈ ದುರ್ಘಟನೆ ಸ್ಥಳೀಯರಲ್ಲಿ ದುಃಖದ ವಾತಾವರಣ ಮೂಡಿಸಿದೆ.
MUST WATCH : ಕಾಂಗ್ರೆಸ್ ಶಾಸಕನಿಗೆ ದಿಢೀರ್ ಹೃದಯಾಘಾತ… ಖಾಸಗಿ ಆಸ್ಪತ್ರೆಗೆ ದಾಖಲು..




