Raichur ಜಿಲ್ಲೆಯ ಸಿರವಾರ ತಾಲೂಕಿನ ಮಲ್ಲಟ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿ ಜೆಸ್ಕಾಂ ಕಚೇರಿಗೆ ಬೆಂಕಿ ಹಚ್ಚಿದ್ದಾನೆ.

Raichur ಜಿಲ್ಲೆಯ ಸಿರವಾರ ತಾಲೂಕಿನ ಮಲ್ಲಟ ಗ್ರಾಮದಲ್ಲಿ JESCOM Office Fire ಘಟನೆ ಸಂಭವಿಸಿದೆ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದ ಕಾರಣ ಮನೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೊಬ್ಬ ಜೆಸ್ಕಾಂ ಉಪ ವಿಭಾಗದ ಕಚೇರಿಗೆ ಬೆಂಕಿ ಹಚ್ಚಿದ್ದಾನೆ.
12 ಸಾವಿರ ರೂ. ಬಾಕಿ ಬಿಲ್
ಆರೋಪಿ ಶಿವಪ್ಪ ತಂದೆ ಬಸನಗೌಡ ಕಳೆದ ಕೆಲವು ದಿನಗಳಿಂದ ಸುಮಾರು 12 ಸಾವಿರ ರೂಪಾಯಿ ವಿದ್ಯುತ್ ಬಿಲ್ ಪಾವತಿಸಿರಲಿಲ್ಲ ಎನ್ನಲಾಗಿದೆ. ಹಲವು ಬಾರಿ ಸೂಚನೆ ನೀಡಿದರೂ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಲೈನ್ಮ್ಯಾನ್ ನಿಯಮಾನುಸಾರ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು.
MUST READ : ಗೋಲ್ಡ್ ಪ್ರಿಯರಿಗೆ ಗುಡ್ನ್ಯೂಸ್ – ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ
ಕೋಪದಲ್ಲಿ ಕಚೇರಿಗೆ ಬೆಂಕಿ
ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಆಕ್ರೋಶಗೊಂಡ ಶಿವಪ್ಪ, ಮಲ್ಲಟ ಗ್ರಾಮದ ಜೆಸ್ಕಾಂ ಶಾಖಾ ಕಚೇರಿಗೆ ತೆರಳಿ ಬೆಂಕಿ ಹಚ್ಚಿದ್ದಾನೆ. ಬೆಂಕಿಯಿಂದ ಕಚೇರಿಯಲ್ಲಿದ್ದ ಕಂಪ್ಯೂಟರ್ಗಳು, ಪೀಠೋಪಕರಣಗಳು ಹಾಗೂ ಪ್ರಮುಖ ದಾಖಲೆಗಳಿದ್ದ ಫೈಲ್ಗಳು ಸುಟ್ಟು ಭಸ್ಮವಾಗಿವೆ.
ಘಟನೆ ಕುರಿತು ಮಾಹಿತಿ ಪಡೆದ ಸಿರವಾರ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಹಾಗೂ ಕಾನೂನು ಕ್ರಮ ಕೈಗೊಂಡಿದ್ದಾರೆ.
MUST WATCH : ಹೆಣ ಹೊರೋಕೆ 20 ಜನರು ಬೇಕು – ಮಳೆ ಬಂದ್ರೆ ರಸ್ತೆ ಅಲ್ಲ… ಕೆಸರು ಗದ್ದೆ | NEWS |




