Raichur ಜಿಲ್ಲೆಯ ದೇವದುರ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ರೇಣುಕಾರಾಜ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Raichur ಜಿಲ್ಲೆಯ ದೇವದುರ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೊಹರಂ ಭದ್ರತಾ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ರೇಣುಕಾರಾಜ (38) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ವಾಹನ ಚಾಲನೆ ವೇಳೆ ಕಾಣಿಸಿಕೊಂಡ ಎದೆನೋವು
ಮೃತ ರೇಣುಕಾರಾಜ ಅವರು ದೇವದುರ್ಗ ಸಿಪಿಐ ವಾಹನ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮದರಕಲ್ ಪ್ರದೇಶದಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ವೇಳೆ ಜೀಪ್ ಚಾಲನೆ ಮಾಡುತ್ತಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಖಾಸಗಿ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಲಾಯಿತಾದರೂ, ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.
MUST READ : ಗೋಲ್ಡ್ ಪ್ರಿಯರಿಗೆ ಗುಡ್ನ್ಯೂಸ್ – ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಪೊಲೀಸ್ ಇಲಾಖೆಯಲ್ಲಿ ಶೋಕ
ಲಿಂಗಸುಗೂರು ತಾಲೂಕಿನ ಅಮದಿಹಾಳ ಗ್ರಾಮದ ನಿವಾಸಿಯಾಗಿದ್ದ ರೇಣುಕಾರಾಜ ಅವರು 2008ನೇ ಬ್ಯಾಚ್ನ ಪೊಲೀಸ್ ಕಾನ್ಸ್ಟೇಬಲ್ ಆಗಿದ್ದರು. ಅವರ ಅಕಾಲಿಕ ನಿಧನದಿಂದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ದುಃಖ ವ್ಯಕ್ತಪಡಿಸಿದ್ದು, ಇಲಾಖೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
MUST WATCH : ಹೆಣ ಹೊರೋಕೆ 20 ಜನರು ಬೇಕು – ಮಳೆ ಬಂದ್ರೆ ರಸ್ತೆ ಅಲ್ಲ… ಕೆಸರು ಗದ್ದೆ | NEWS |




