Railway ನೇಮಕಾತಿ; 4,000ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ, ಖಾಲಿ ಹುದ್ದೆಗಳ ಸಂಖ್ಯೆ ಹೆಚ್ಚಳ!

ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಎದುರು ನೋಡುತ್ತಿರುವ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿ (RRB) ಸಿಹಿಸುದ್ದಿ ನೀಡಿದೆ. CEN 04/2026 ಅಧಿಸೂಚನೆಯಡಿ ಪ್ರಕಟಿಸಿದ್ದ ಖಾಲಿ ಹುದ್ದೆಗಳ ಸಂಖ್ಯೆಯನ್ನು ಪರಿಷ್ಕರಿಸಲಾಗಿದ್ದು, ಹೆಚ್ಚುವರಿಯಾಗಿ 36 ಹುದ್ದೆಗಳನ್ನು ಸೇರ್ಪಡೆ ಮಾಡಲಾಗಿದೆ. ಇದರೊಂದಿಗೆ ಒಟ್ಟು ಹುದ್ದೆಗಳ ಸಂಖ್ಯೆ 3,993ರಿಂದ 4,029ಕ್ಕೆ ಏರಿಕೆಯಾಗಿದೆ.
36 ಹೆಚ್ಚುವರಿ ಹುದ್ದೆಗಳ ಸೇರ್ಪಡೆ
ಇತ್ತೀಚಿನ ತಿದ್ದುಪಡಿಯಂತೆ ಒಟ್ಟು 36 ಹೊಸ ಹುದ್ದೆಗಳನ್ನು ಸೇರಿಸಲಾಗಿದೆ. ಈ ಪೈಕಿ 35 ಹುದ್ದೆಗಳು ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ (CMA) ಹುದ್ದೆಗಳಾಗಿವೆ. ಉಳಿದ ಒಂದು ಹುದ್ದೆಯನ್ನು RRB ಸಿಕಂದರಾಬಾದ್ ವಲಯದ ಜೂನಿಯರ್ ಎಂಜಿನಿಯರ್/ಎಲೆಕ್ಟ್ರಿಕಲ್/TRS ವಿಭಾಗಕ್ಕೆ ಸೇರ್ಪಡೆ ಮಾಡಲಾಗಿದೆ.
CMA ಹುದ್ದೆಗೆ ಶೈಕ್ಷಣಿಕ ಅರ್ಹತೆ
CMA ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭೌತಶಾಸ್ತ್ರ (Physics) ಮತ್ತು ರಸಾಯನಶಾಸ್ತ್ರ (Chemistry) ವಿಷಯಗಳನ್ನು ಒಳಗೊಂಡಂತೆ ಕನಿಷ್ಠ ಶೇ.45 ಅಂಕಗಳೊಂದಿಗೆ B.Sc ಪದವಿ ಪಡೆದಿರಬೇಕು.
READ THIS : ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 3,993 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ ಎಷ್ಟು?
CMA ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜನವರಿ 2027ರ ವೇಳೆಗೆ 18ರಿಂದ 33 ವರ್ಷಗಳ ನಡುವೆ ಇರಬೇಕು. ನಿಯಮಾನುಸಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯವಾಗಲಿದೆ.
ತಿಂಗಳಿಗೆ ₹35,400 ಆರಂಭಿಕ ವೇತನ
CMA ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ ವೇತನ ಶ್ರೇಣಿಯನ್ವಯ ಆರಂಭಿಕ ಮೂಲ ವೇತನವಾಗಿ ತಿಂಗಳಿಗೆ ₹35,400 ದೊರೆಯಲಿದೆ. ಇದರ ಜೊತೆಗೆ ನಿಯಮಾನುಸಾರ ಇತರ ಭತ್ಯೆಗಳು ಮತ್ತು ಸೌಲಭ್ಯಗಳು ಲಭ್ಯವಾಗಲಿವೆ.
ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ
ಖಾಲಿ ಹುದ್ದೆಗಳ ಸಂಖ್ಯೆ ಹೆಚ್ಚಳದಿಂದ ಅರ್ಹ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಮತ್ತೊಂದು ಅವಕಾಶ ಸಿಕ್ಕಂತಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಹಾಗೂ ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ ಮಾಹಿತಿಯನ್ನು ಸಂಬಂಧಪಟ್ಟ RRBಯ ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸುವುದು ಅಗತ್ಯ.

ಹುದ್ದೆಗಳ ಸಂಖ್ಯೆ ಹೆಚ್ಚಳವಾಗಿರುವುದರಿಂದ ಅರ್ಹ ಅಭ್ಯರ್ಥಿಗಳು ಪರಿಷ್ಕೃತ ಅಧಿಸೂಚನೆಯನ್ನು ಗಮನಿಸಿ, ತಮ್ಮ ಅರ್ಹತೆ ಮತ್ತು ಅರ್ಜಿ ವಿವರಗಳನ್ನು ಖಚಿತಪಡಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳುವುದು ಸೂಕ್ತ.
MUST WATCH : ನವವಧು ಸಾ* ಪ್ರಕರಣಕ್ಕೆ ಟ್ವಿಸ್ಟ್ – ಅತ್ಯಾಚಾರವೆಸಗಿ ಯುವತಿ ಕೊ*!




