Rain Alert : ಮುಂದಿನ 3 ದಿನ ಭರ್ಜರಿ ಮಳೆ – ಯಾವ ಜಿಲ್ಲೆಗಳಲ್ಲಿ ಮಳೆ ಅಬ್ಬರ.

Rain Alert : ರಾಜ್ಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.

ಜೂನ್ 13ರಿಂದ 15ರವರೆಗೆ ಭಾರೀ ಮಳೆ
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 13ರಿಂದ 15ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ನಿರಂತರ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ನಿರೀಕ್ಷೆಯಿದೆ.
ಇದನ್ನು ಓದಿ : ರಾಜ್ಯಾದ್ಯಂತ ಮುಂದುವರಿದ ಮುಂಗಾರು ಮಳೆ ಆರ್ಭಟ

ಮೀನುಗಾರರು ಎಚ್ಚರಿಕೆಯಿಂದ ಇರಲು ಸೂಚನೆ
ಕರಾವಳಿ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಮುದ್ರ ತೀರದ ನಿವಾಸಿಗಳು ಹಾಗೂ ಮೀನುಗಾರರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಹಾಗೂ ಪ್ರವಾಹದ ಪರಿಸ್ಥಿತಿ ಎದುರಾಗುವ ಸಾಧ್ಯತೆಯೂ ಇದೆ.

ಯಾವ ಜಿಲ್ಲೆಗಳಲ್ಲಿ ಮಳೆ ಅಬ್ಬರ?
ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಕೊಡಗು, ಹಾಸನ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಧ್ಯಂತರ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.
ಇದನ್ನು ನೋಡಿ : ಬಿಲ್ಡಪ್ ಕೊಡ್ತಿದ್ದ ರೌಡಿಗಳಿಗೆ ಮಾಸ್ಟರ್ ಸ್ಟ್ರೋಕ್! -ರೌಡಿಗಳ ವಿಡಿಯೋಗಳಿಗೆ CCB ಪೊಲೀಸರು ಬ್ರೇಕ್





