Rain Alert : ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ – ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Rain Alert : ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವ್ಯಾಪಕ ಮಳೆಯ ನಿರೀಕ್ಷೆಯಿದ್ದು, ಚಿಕ್ಕಮಗಳೂರು ಸೇರಿದಂತೆ ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಫೆಸಿಪಿಕ್ ಸಾಗರದಲ್ಲಿ ಉಷ್ಣಾಂಶ ಹೆಚ್ಚಳವಾಗಿದ್ದು, ಹಿಂಗಾರು ಮಳೆ ವಾಡಿಕೆಯಂತೆ ಬರುವ ನೀರಿಕ್ಷೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದನ್ನು ಓದಿ : ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ?

ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ
ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 50ರಿಂದ 60 ಕಿಲೋಮೀಟರ್ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಇದಲ್ಲದೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.

ನಿನ್ನೆ ಎಲ್ಲೆಲ್ಲಿ ಎಷ್ಟು ಮಳೆಯಾಯಿತು?
ರಾಜ್ಯದ ಹಲವು ಭಾಗಗಳಲ್ಲಿ ಗುರುವಾರ ಉತ್ತಮ ಮಳೆಯಾಗಿದೆ.
- ಹಾಸನ ಜಿಲ್ಲೆ, ಸಕಲೇಶಪುರದ ಹೊಗದಹಳ್ಳಿ – 153.5 ಮಿ.ಮೀ.
- ಕೊಡಗು ಜಿಲ್ಲೆ, ವಿರಾಜಪೇಟೆ ಬಿರುನಾನಿ – 149 ಮಿ.ಮೀ.
- ಶಿವಮೊಗ್ಗ ಜಿಲ್ಲೆ, ಹೊಸನಗರ – 128 ಮಿ.ಮೀ.
- ದಕ್ಷಿಣ ಕನ್ನಡ, ಬೆಳ್ತಂಗಡಿ ನೆರಿಯ – 104 ಮಿ.ಮೀ.
- ಚಿಕ್ಕಮಗಳೂರು, ಶೃಂಗೇರಿ ಕಿಗ್ಗ – 91.5 ಮಿ.ಮೀ.
- ಉತ್ತರ ಕನ್ನಡ, ಸಿದ್ದಾಪುರ ನಿಲ್ಕುಂದ – 89.5 ಮಿ.ಮೀ.
- ಉಡುಪಿ ಜಿಲ್ಲೆ, ಕಾರ್ಕಳ ವರಂಗ – 51.5 ಮಿ.ಮೀ.
ಇದನ್ನು ನೋಡಿ : SHOPPING MOODನಲ್ಲಿ ಮಾಜಿ CM SIDDU – MANTHRI MALLನಲ್ಲಿ SIDDU FULL JOLLY JOLLY





