Rain ALert : ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ಅಬ್ಬರಿಸುತ್ತಿದೆ.

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ಅಬ್ಬರಿಸುತ್ತಿದೆ. ಉಳಿದೆಡೆ ಒಣ ಹವಾಮಾನ ಇದ್ದು ಅಲ್ಲಲ್ಲಿ ಹಗುರ ಮಳೆಯಾಗುತ್ತಿದೆ. ಜೂನ್ 29ರ ಬಳಿಕ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ
ಕರಾವಳಿ ಮತ್ತು ಪಶ್ಚಿಮ ಘಟ್ಟದ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಜೂನ್ 26ರಿಂದ ಜುಲೈ ಆರಂಭದವರೆಗೆ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ
ಮುಂದಿನ 24 ಗಂಟೆಗಳಲ್ಲಿ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲೂ 30ರಿಂದ 40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ.
ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು ಹಾಗೂ ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಇದನ್ನು ಓದಿ : ಭಾರೀ ಮಳೆ ಮುನ್ಸೂಚನೆ – ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್!

3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಜೂನ್ 29ರಿಂದ ಜುಲೈ 2ರವರೆಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಬಿರುಗಾಳಿ ಸಹಿತ ಭಾರೀ ಮಳೆ
ಜೂನ್ 30ರಂದು ಹಾವೇರಿ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಬಿರುಗಾಳಿ ಸಹಿತ ಭಾರೀ ಮಳೆಯ ಸಾಧ್ಯತೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಕೆಲವೆಡೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಹಗುರ ಮಳೆಯ ಮುನ್ಸೂಚನೆ ಇದ್ದು, ಕನಿಷ್ಠ 20 ಡಿಗ್ರಿ ಹಾಗೂ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ.
ಇದನ್ನು ನೋಡಿ : ನಾನೇನು ಅಲ್ಲಿ ಗಲಾಟೆ ಮಾಡೋಕೆ ಹೋಗ್ತಿಲ್ಲ ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ





