Rain Alert : ರಾಜ್ಯದಲ್ಲಿ ಜೋರಾಗ್ತಿದೆ ಮುಂಗಾರು ಆರ್ಭಟ.

ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕಳೆದ ಕೆಲ ದಿನಗಳಿಂದ ಕಣ್ಮರೆಯಾಗಿದ್ದ ಮಳೆರಾಯ ಇದೀಗ ಅಬ್ಬರಿಸಲು ಆರಂಭಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ 3 ಗಂಟೆ ಭಾರೀ ಮಳೆ!
ಮುಂದಿನ ಮೂರು ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಗರ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕಿದೆ.

ಯೆಲ್ಲೋ ಅಲರ್ಟ್ ಘೋಷಿತ ಜಿಲ್ಲೆಗಳು
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕೆಲವೆಡೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇದನ್ನು ಓದಿ : ಬೆಂಗಳೂರು ಸೇರಿ ರಾಜ್ಯದಲ್ಲಿ ವರುಣನ ಅಬ್ಬರ, ಭಾರೀ ಮಳೆಯ ಎಚ್ಚರಿಕೆ!

ಸಿಲಿಕಾನ್ ಸಿಟಿಯಲ್ಲೂ ಮಳೆ
ಸಂಜೆಯಾಗುತ್ತಿದ್ದಂತೆ ಬೆಂಗಳೂರಿನ ಹಲವು ಭಾಗಗಳಲ್ಲಿ ಮಳೆ ಆರಂಭವಾಗಿದ್ದು, ಸಂಪಂಗಿರಾಮನಗರ, ವಿಧಾನಸೌಧ, ವಸಂತನಗರ, ಕಾರ್ಪೊರೇಷನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ನಿನ್ನೆ ರಾತ್ರಿ ಸುರಿದ ಮಳೆಯ ಬಳಿಕ ಇಂದು ಕೂಡ ಮಳೆರಾಯ ಅಬ್ಬರಿಸುತ್ತಿದ್ದಾನೆ.
ಭಾರೀ ಮಳೆಯಾಗುವ ಜಿಲ್ಲೆಗಳು
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

Rain Alert – ಸಾಧಾರಣಾ ಮಳೆಯಾಗುವ ಜಿಲ್ಲೆಗಳು
ಇದರ ಜೊತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಗಳಲ್ಲೂ ಜೂನ್ 15ರವರೆಗೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ಇದನ್ನು ನೋಡಿ : ವಿವಾಹಿತೆಗೆ ನರಕ ತೋರಿಸಿದ ಕೀಚಕ ಬೆತ್ತಲೆ ವಿಡಿಯೋ ಇಟ್ಕೊಂಡು ಬ್ಲಾಕ್ಮೇಲ್





