Rain Alert : ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದ ಕೆಲವೆಡೆ ಭಾರಿ ಮಳೆ – ಯೆಲ್ಲೋ ಅಲರ್ಟ್

Rain Alert : ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲೆ ಮಳೆ!
ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಕಲಬುರಗಿ, ಮೈಸೂರು, ಚಾಮರಾಜನಗರದಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಲರ್ಟ್ ನೀಡಿದೆ. ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಲವಾದ ಬಿರುಗಾಳಿ ಬೀಸಲಿದೆ. ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯ ಸಾಧ್ಯತೆ ಇದೆ.
ಇದನ್ನು ಓದಿ : ರಾಜ್ಯದಲ್ಲಿ ಕೈಕೊಟ್ಟ ಮಳೆರಾಯ – ಶೇ.21ರಷ್ಟು ಮಳೆ ಕೊರತೆ

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಇನ್ನು ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಬೆಳಗಾವಿ, ಗದಗ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದ್ದು, ಈ ಹಿನ್ನಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇಂದು ಬೆಳಗ್ಗೆಯಿಂದಲೂ ಕೂಡ ತುಮಕೂರಿನಲ್ಲಿ ಮೋಡ ಕವಿದ ವಾತಾವರಣ
ಇತ್ತ ತುಮಕೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಇದ್ರು ಕೂಡ ಮಳೆ ಆಗ್ತಾ ಇಲ್ಲ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ರು ಕೂಡ ತುಮಕೂರು ಜಿಲ್ಲೆಯಲ್ಲಿ ಮಾತ್ರ ಮಳೆ ಕಡಿಮೆ ಆಗಿದೆ. ಇಂದು ಬೆಳಗ್ಗೆಯಿಂದಲೂ ಕೂಡ ಮೋಡ ಕವಿದ ವಾತಾವರಣ ಇದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಯಾವ ಪ್ರಮಾಣದಲ್ಲಿ ಮಳೆ ಆಗಲಿದೆ ಅನ್ನೋದನ್ನ ನೋಡಬೇಕಿದೆ.

ಇದನ್ನು ನೋಡಿ : 30 ದಿನದಲ್ಲಿ ದಾಖಲೆ ಮದ್ಯ ಮಾರಾಟ – ಬೆಲೆ ಏರಿಕೆಯಾದ್ರೂ ಕುಗ್ಗದ ಮದ್ಯಪ್ರಿಯರು




