
RAIN ALERT : ಬೆಂಗಳೂರು-ಮೈಸೂರು-ಮಂಡ್ಯ-ಚಾ.ನಗರ ಜಿಲ್ಲೆಗಳಲ್ಲಿ 3 ದಿನ ಭಾರಿ ಮಳೆ!
ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದರೂ, ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರದೇಶ ಹಾಗೂ ಮೇಲ್ಮೈ ಸುಳಿಗಾಳಿಯ ಪರಿಣಾಮ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಚಟುವಟಿಕೆ ಮುಂದುವರಿಯುವ ಸಾಧ್ಯತೆಯಿದೆ.
ಅಕ್ಟೋಬರ್ 9 ರಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ
ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರದ ಮುನ್ಸೂಚನೆಯಂತೆ, ಅಕ್ಟೋಬರ್ 9ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ತುಮಕೂರು, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಅಕ್ಟೋಬರ್ 7ರಿಂದ 10ರವರೆಗೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನ ಮುನ್ನೆಚ್ಚರಿಕೆಯನ್ನೂ ನೀಡಲಾಗಿದೆ.
READ THIS : ರಾಜ್ಯದಲ್ಲಿಂದು ವರುಣನ ಆರ್ಭಟ – 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಮುಂದಿನ 7 ದಿನಗಳ ಹವಾಮಾನ
ಕರಾವಳಿ ಕರ್ನಾಟಕ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡದಲ್ಲಿ ಬಹುತೇಕ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.
ಉತ್ತರ ಒಳನಾಡು: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಬಹುತೇಕ ಒಣಹವೆ ಇರುವ ಸಾಧ್ಯತೆಯಿದೆ.

RAIN ALERT – ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ನಗರದ ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಅಕ್ಟೋಬರ್ 9ರಂದು ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ.
MUST WATCH : ರೈತರಿಗೆ ಸಾಲದ ಕಿರುಕುಳ ಕೊಟ್ರೆ FIR – ತುಮಕೂರು DC – SP ಖಡಕ್ ವಾರ್ನಿಂಗ್





