Rain Alert : ಇಂದು ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ರಾಜ್ಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಹಾಗೂ ಕರಾವಳಿ ಭಾಗದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಮಲೆನಾಡಿನಲ್ಲೂ ಭಾರಿ ಮಳೆ
ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆಯ ಮುನ್ಸೂಚನೆ ಇದ್ದು, ಈ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ.
ಮಳೆಯ ಜತೆಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಹಾಸನ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಇದನ್ನು ಓದಿ : ಚಂಡಮಾರುತ ಎಫೆಕ್ಟ್ – ಮುಂದಿನ 4 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ

ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ
ಬೆಳಗಾವಿ, ಗದಗ, ಕೊಪ್ಪಳ, ಬಾಗಲಕೋಟೆ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಆದರೆ ಈ ಭಾಗಗಳಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯಿದ್ದು, ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಬಹುದು ಎಂದು ಮುನ್ಸೂಚನೆ ನೀಡಲಾಗಿದೆ.
ಆಗಸ್ಟ್ 10ರ ಬಳಿಕ ಮಳೆ ಇಳಿಕೆ
ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.
ಆದರೆ ಆಗಸ್ಟ್ 10 ಮತ್ತು 11ರ ಬಳಿಕ ಮಳೆಯ ತೀವ್ರತೆ ಗಣನೀಯವಾಗಿ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ನೋಡಿ : ಕೈ ಶಾಸಕರಿಗೆ ಹೆಚ್ಡಿಕೆ ಬಿಗ್ ಆಫರ್ – ಜೆಡಿಎಸ್ಗೆ ಬರುವಂತೆ ಮುಕ್ತ ಆಹ್ವಾನ




