
RAIN ALERT : ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರ – ತುಮಕೂರಿನಲ್ಲಿ ಹೇಗಿರಲಿದೆ ಗೊತ್ತಾ.?
ರಾಜ್ಯದಲ್ಲಿ ದುರ್ಬಲವಾಗಿದ್ದ ಮುಂಗಾರು ಮಳೆ ಇದೀಗ ಮತ್ತೆ ಚುರುಕುಗೊಂಡಿದೆ. ಹಲವು ಜಿಲ್ಲೆಗಳಲ್ಲಿ ಮಳೆರಾಯ ತಂಪೆರೆದಿದ್ದು, ಮುಂದಿನ ಐದು ದಿನಗಳ ಕಾಲವೂ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ರಾಜ್ಯದಲ್ಲಿ ಮಳೆ ಕೈಕೊಟ್ಟು ಬರದ ಆತಂಕ ಎದುರಾಗಿತ್ತು. ಬೆಳೆಗಳು ಒಣಗಿ ರೈತರು ಕಂಗಾಲಾಗಿದ್ರು. ಕೆರೆ-ಕಟ್ಟೆಗಳು ಬತ್ತಿ ಹೋಗಿ ಹಲವೆಡೆ ಜಾನುವಾರುಗಳಿಗೂ ಮೇವು-ನೀರಿನ ಸಮಸ್ಯೆ ಎದುರಾಗಿತ್ತು.
ಇದೀಗ ಹಲವೆಡೆ ಸುರಿಯುತ್ತಿರುವ ಮಳೆ ರೈತರಲ್ಲಿ ಕೊಂಚ ನೆಮ್ಮದಿ ಮೂಡಿಸಿದೆ. ಇನ್ನು ಇಂದು ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
READ THIS : ಹವಾಮಾನದಲ್ಲಿ ಬಿಗ್ ಟರ್ನ್ – ಈ ದಿನದಿಂದ ರಾಜ್ಯಾದ್ಯಂತ ಭಾರಿ ಮಳೆ!

ಮಳೆಯಿಂದಾಗಿ ನಾನಾ ಅವಾಂತರ
ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಉತ್ತರ ಕನ್ನಡ, ಹಾವೇರಿ, ಬಳ್ಳಾರಿ, ವಿಜಯನಗರ, ಗದಗ, ಧಾರವಾಡ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ. ಇತ್ತೀಚೆಗೆ ಮಳೆ ಕೊರತೆಯಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿದ್ವು. ಇದೀಗ ಮಳೆ ಮತ್ತೆ ಚುರುಕುಗೊಂಡಿರೋದ್ರಿಂದ ಉಳಿದಿರುವ ಬೆಳೆಗಳಿಗೆ ಜೀವ ಸಿಗುವ ನಿರೀಕ್ಷೆ ರೈತರಲ್ಲಿದೆ. ಮತ್ತೊಂದೆಡೆ ಮಳೆಯ ಜೊತೆಗೆ ಗುಡುಗು, ಬಿರುಗಾಳಿ ಹಾಗೂ ಧಾರಾಕಾರ ಮಳೆಯಿಂದಾಗಿ ನಾನಾ ಅವಾಂತರಗಳೂ ಸೃಷ್ಟಿಯಾಗಿದ್ದು, ರಸ್ತೆಗಳ ಮೇಲೆ ನೀರು ನಿಂತು ವಾಹನ ಸವಾರರು ಪರದಾಡುವಂತಾಯ್ತು.

RAIN ALERT – ಮುಂದಿನ ಐದು ದಿನಗಳ ಕಾಲವೂ ಮಳೆ
ಒಟ್ಟಿನಲ್ಲಿ ಬರದ ಹೊಡೆತದಿಂದ ಕಂಗೆಟ್ಟಿದ್ದ ರಾಜ್ಯದ ಜನರಿಗೆ ಮಳೆರಾಯ ಕೊಂಚ ತಂಪೆರೆದಿದ್ದಾನೆ.
ಮುಂದಿನ ಐದು ದಿನಗಳ ಕಾಲವೂ ಮಳೆಯ ಸಾಧ್ಯತೆ ಇರೋದ್ರಿಂದ, ರೈತರು ಹಾಗೂ ಸಾರ್ವಜನಿಕರಲ್ಲಿ ನಿರೀಕ್ಷೆ ಮೂಡಿದೆ.
MUST WATCH : LOCAL ELECTIONಗೆ CONGRESS ತಯಾರಿ – ತುಮಕೂರಲ್ಲಿ ಪ್ರಚಾರ ಸಮಿತಿ FULL ACTIVE





