Rain Alert |ಇಂದು ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Rain Alert : ರಾಜ್ಯದ ಹಲವು ಭಾಗಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಹಾಗೂ ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಬಿರುಗಾಳಿಯ ವೇಗವೂ ಹೆಚ್ಚಿರಬಹುದೆಂದು ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನು ಓದಿ : ಮುಂಗಾರು ಆರ್ಭಟ – ಮುಂದಿನ 3 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಈ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಇಳಿಕೆ
ಇನ್ನೊಂದೆಡೆ, ಜುಲೈ 11ರಿಂದ ರಾಜ್ಯದಲ್ಲಿ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.
ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ರಾಜಧಾನಿ ಬೆಂಗಳೂರು ಸೇರಿದಂತೆ ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ನೋಡಿ : ತುಮಕೂರಿನಲ್ಲಿ SIR ವಿಚಾರಕ್ಕೆ ವಿವಾದ- ಶಾಸಕ SURESH GOWDA ಏನಂದ್ರು ನೋಡಿ




