Rain Alert : 5 ದಿನಗಳ ಕಾಲ ರಾಜ್ಯಾದ್ಯಂತ ಜೋರು ಮಳೆ

ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ದಿನೇದಿನೇ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 14ರವರೆಗೆ ರಾಜ್ಯದ ಹಲವೆಡೆ ಮಳೆ
ಜೂನ್ 10ರಿಂದ ಜೂನ್ 14ರವರೆಗೆ ರಾಜ್ಯದ ಹಲವೆಡೆ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮತ್ತು ಕೆಲವೆಡೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅದರಲ್ಲೂ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ.

ಯೆಲ್ಲೋ ಅಲರ್ಟ್ ಘೋಷಿತ ಜಿಲ್ಲೆಗಳು
ಹವಾಮಾನ ಇಲಾಖೆ ಕರಾವಳಿ ಭಾಗದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ವಿಶೇಷವಾಗಿ ಕಲಬುರಗಿ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇದನ್ನು ಓದಿ : ರಾಜ್ಯದ ಜನರೇ ಎಚ್ಚರ – ಜೂನ್ 11ರವರೆಗೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ!
ಈ ಪ್ರದೇಶಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಇದ್ರಿಂದಾಗಿ ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ತಿಳಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
ಇನ್ನು ರಾಜಧಾನಿ ಬೆಂಗಳೂರಿನಲ್ಲೂ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ತಂಪಾದ ಗಾಳಿಯೊಂದಿಗೆ ನಗರದಲ್ಲಿ ಮಳೆಯ ವಾತಾವರಣ ಕಂಡುಬರಲಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ದಾಖಲಾಗುವ ನಿರೀಕ್ಷೆಯಿದೆ.
ಜೊತೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ಸಲಹೆ ನೀಡಿದೆ
ಇದನ್ನು ನೋಡಿ : ಸಚಿವ ಸ್ಥಾನ ಪ್ರಶ್ನೆಗೆ ಜಮೀರ್ ನಕಾರ ಕ್ಯಾಮರಾ ಕಂಡು ಬೆನ್ನು ತಿರುಗಿ ಕುಳಿತ ಜಮೀರ್




