
RAIN ALERT : ಗುಡುಗು ಸಹಿತ ಭಾರೀ ಮಳೆ, ಕರ್ನಾಟಕ ಸೇರಿ 7 ರಾಜ್ಯಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ
ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಿಗೆ ಹವಾಮಾನ ಇಲಾಖೆ ಮಳೆಯ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ 28ರಂದು ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಮಹಾರಾಷ್ಟ್ರ, ಉತ್ತರಾಖಂಡ, ಹಿಮಾಚಲ ಪ್ರದೇಶ ಹಾಗೂ ಜಮ್ಮು-ಕಾಶ್ಮೀರದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮಳೆಯ ಹಿನ್ನೆಲೆಯಲ್ಲಿ ಈ ಏಳು ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯಾಗುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಕರ್ನಾಟಕದಲ್ಲಿ ಮಳೆ ಜೋರು
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 28ರಿಂದ ರಾಜ್ಯದ ಸುಮಾರು 17 ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಭಾರೀ ಮಳೆಯ ಮುನ್ಸೂಚನೆ ಇರುವ ಪ್ರದೇಶಗಳಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
READ THIS : ಹವಾಮಾನದಲ್ಲಿ ಬಿಗ್ ಟರ್ನ್ – ಈ ದಿನದಿಂದ ರಾಜ್ಯಾದ್ಯಂತ ಭಾರಿ ಮಳೆ!

ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ?
ಇನ್ನು ರಾಜಧಾನಿ ಬೆಂಗಳೂರಿನಲ್ಲೂ ಮಳೆಯ ಮುನ್ಸೂಚನೆ ಇದೆ. ಇಂದು ಸಂಜೆ ನಗರದ ಕೆಲವು ಭಾಗಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದ್ದು, ನಾಳೆ ಸೆಪ್ಟೆಂಬರ್ 28ರಂದು ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ.
ಸೆಪ್ಟೆಂಬರ್ 29ರಂದೂ ಬೆಂಗಳೂರಿನ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಮುಂದಿನ ಎರಡು ದಿನ ನಗರದಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಆಗಾಗ್ಗೆ ಮಳೆಯಾಗುವ ಸಾಧ್ಯತೆ ಕಂಡುಬಂದಿದೆ.

ದೆಹಲಿಯಲ್ಲಿ ಮೂರು ದಿನ ಮಳೆ
ದೆಹಲಿಯಲ್ಲೂ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಿಮಾಚಲ ಪ್ರದೇಶದಲ್ಲಿ ಸೆಪ್ಟೆಂಬರ್ 29ರವರೆಗೆ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಸೆಪ್ಟೆಂಬರ್ 28ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಪಶ್ಚಿಮ ಬಂಗಾಳದಲ್ಲೂ ಮಳೆ
ಪಶ್ಚಿಮ ಬಂಗಾಳದಲ್ಲಿ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 1ರವರೆಗೆ ಮಳೆಯ ಚಟುವಟಿಕೆ ಮುಂದುವರಿಯುವ ಸಾಧ್ಯತೆ ಇದೆ.
ದಕ್ಷಿಣ ಬಂಗಾಳದಲ್ಲಿ ಮಳೆಯ ಪ್ರಮಾಣ ತುಸು ಕಡಿಮೆಯಾಗುವ ನಿರೀಕ್ಷೆಯಿದ್ದರೂ, ರಾಜ್ಯದ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಂಧ್ರ ಕರಾವಳಿಯಲ್ಲಿ ಬಿರುಗಾಳಿ ಎಚ್ಚರಿಕೆ
ಆಂಧ್ರ ಪ್ರದೇಶದ ಕರಾವಳಿ ಭಾಗದಲ್ಲೂ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
ಸೆಪ್ಟೆಂಬರ್ 28ರಿಂದ 30ರವರೆಗೆ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ ಸುಮಾರು 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಹಾಗೂ ಕರಾವಳಿ ಭಾಗದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

MUST WATCH : ಬೈರಮಂಗಲ ರೈತರ ಮೇಲೆ FIR – ರಸ್ತೆ ತಡೆದಿದ್ದು ತಪ್ಪು ಎಂದ ಸಿಎಂ




