
RAIN ALERT : ಬಂಗಾಳಕೊಲ್ಲಿಯ ಚಂಡಮಾರುತದಿಂದ ರಾಜ್ಯದಲ್ಲಿ ಮಳೆ ಅಬ್ಬರ
ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಅದರಲ್ಲೂ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
30–40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ
ಇನ್ನು ರಾಜ್ಯದ ಕೆಲವು ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಗುಡುಗು, ಮಿಂಚಿನೊಂದಿಗೆ ಕೆಲವೆಡೆ ತೀವ್ರ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
READ THIS : ಮುಂಗಾರಲ್ಲಿ ಕೈ ಕೊಟ್ಟ ಮಳೆ – ಹಿಂಗಾರಿನಲ್ಲಿ ರಣಾರ್ಭಟ ಫಿಕ್ಸ್!

ರಾಜ್ಯದ ಹಲವೆಡೆ ಮಳೆ ಎಚ್ಚರಿಕೆ
ಮತ್ತೊಂದೆಡೆ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲೂ ಹವಾಮಾನ ವೈಪರೀತ್ಯದ ಎಚ್ಚರಿಕೆ ನೀಡಲಾಗಿದೆ. ಮಳೆಯ ಜೊತೆಗೆ ಗಾಳಿಯ ವೇಗವೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕಿದೆ. ವಿಶೇಷವಾಗಿ ಗುಡುಗು, ಮಿಂಚಿನ ಸಂದರ್ಭದಲ್ಲಿ ಮರಗಳ ಕೆಳಗೆ ಆಶ್ರಯ ಪಡೆಯದಂತೆ ಹಾಗೂ ಅನಗತ್ಯವಾಗಿ ಹೊರಗೆ ಸಂಚರಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ.
ಹಿಂಗಾರು ಮಳೆ ಅಬ್ಬರ ಜೋರು
ಇನ್ನು ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಹಿಂಗಾರು ಮಳೆ ಕೆಲವೆಡೆ ರೈತರಲ್ಲಿ ನೆಮ್ಮದಿ ಮೂಡಿಸಿದೆ. ಆದರೆ ಅತಿಯಾದ ಮಳೆಯಾದರೆ ಬೆಳೆಗಳಿಗೆ ಹಾನಿಯಾಗುವ ಆತಂಕವೂ ಇದೆ. ಹೀಗಾಗಿ ರೈತರು ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದು ಸೂಕ್ತ.

ಒಟ್ಟಿನಲ್ಲಿ ರಾಜ್ಯದಲ್ಲಿ ಹಿಂಗಾರು ಮಳೆ ಮತ್ತಷ್ಟು ಚುರುಕುಗೊಳ್ಳುವ ಮುನ್ಸೂಚನೆ ಸಿಕ್ಕಿದ್ದು, ಮುಂದಿನ ಮೂರು ದಿನಗಳ ಕಾಲ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
MUST WATCH : SHABARI ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ – ತುಮಕೂರಲ್ಲಿ ಫುಲ್ ಮಾರ್ಕ್ಸ್ ಕೊಟ್ಟ ಫ್ಯಾನ್ಸ್.!




