Rain Alert : ರಾಜ್ಯದಲ್ಲಿ ಮುಂಗಾರು ಆರ್ಭಟ ಜೋರು – ಮುಂದಿನ 3 ದಿನ ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆ

Rain Alert : ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಮುಂದಿನ ಮ3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಯಾವ ಜಿಲ್ಲೆಗೆ ಯೊಲ್ಲೋ ಅಲರ್ಟ್?
ಹವಾಮಾನ ಇಲಾಖೆಯ ವಿಜ್ಞಾನಿ ಡಾ. ಲತಾ ಅವರ ಮಾಹಿತಿ ಪ್ರಕಾರ, ಕರಾವಳಿ ಜಿಲ್ಲೆಗಳು, ಹಾಸನ, ಶಿವಮೊಗ್ಗ, ಕೊಡಗು (ಮಡಿಕೇರಿ) ಹಾಗೂ ಬೆಳಗಾವಿ ಭಾಗಗಳಲ್ಲಿ ಈಗಾಗಲೇ ಉತ್ತಮ ಮಳೆಯಾಗುತ್ತಿದ್ದು, ಈ ಪ್ರದೇಶಗಳಿಗೆ ಇನ್ನೂ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನು ಓದಿ : ಕರ್ನಾಟಕದಲ್ಲಿ ಭಾರಿ ಮಳೆ – ಈ ಜಿಲ್ಲೆಗಳಿಗೆ ಆರೆಂಜ್ ಆಲರ್ಟ್

ಈ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆ
ಮೂರು ದಿನಗಳ ಬಳಿಕ ಈ ಭಾಗಗಳಲ್ಲಿ ಮಳೆಯ ತೀವ್ರತೆ ಹಂತ ಹಂತವಾಗಿ ಕಡಿಮೆಯಾಗುವ ನಿರೀಕ್ಷೆಯಿದೆ. ಇನ್ನೊಂದೆಡೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆಯಿದೆ. ಈ ಭಾಗಗಳಲ್ಲಿ ಮುಂದಿನ ಹತ್ತು ದಿನಗಳವರೆಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೂ, ಭಾರೀ ಮಳೆಯ ನಿರೀಕ್ಷೆ ಇಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

ಮಳೆಯ ಪ್ರಮಾಣ ಕಡಿಮೆ
ಮಳೆಯ ಸಾಧ್ಯತೆ ಹೆಚ್ಚಿರುವ ಜಿಲ್ಲೆಗಳ ಜನರು ಎಚ್ಚರಿಕೆಯಿಂದ ಇರಬೇಕು ಹಾಗೂ ಹವಾಮಾನ ಇಲಾಖೆಯ ಮುಂದಿನ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇದನ್ನು ನೋಡಿ : ಪೌರ ಕಾರ್ಮಿಕರ ಬಹುದಿನಗಳ ಬೇಡಿಕೆ ಈಡೇರಿಕೆ- ಕೊನೆಗೂ ನೇರ ಪಾವತಿ ಆದೇಶ ಪತ್ರ ವಿತರಣೆ




