Rain Alert : ಚುರುಕುಗೊಂಡ ಮುಂಗಾರು – ಮುಂದಿನ ಐದು ದಿನ ರಾಜ್ಯದ ಹಲವೆಡೆ ಮಳೆ ಎಚ್ಚರಿಕೆ

Rain Alert : ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿರುವ ನಡುವೆ, ಮುಂದಿನ ಐದು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ..?
ಇಲಾಖೆ ಮಾಹಿತಿಯ ಪ್ರಕಾರ, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ರೆಡ್ ಅಲರ್ಟ್ ಘೋಷಿತ ಜಿಲ್ಲೆಗಳು
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇದನ್ನು ಓದಿ : ಕರ್ನಾಟಕದ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಇಂದು ಭಾರೀ ಮಳೆ ಸಾಧ್ಯತೆ..!!

ಯೆಲ್ಲೋ ಅಲರ್ಟ್ ಘೋಷಿತ ಜಿಲ್ಲೆಗಳು
ಇದೇ ವೇಳೆ ಬೆಳಗಾವಿ, ರಾಯಚೂರು, ಕಲಬುರಗಿ, ಕೊಪ್ಪಳ ಹಾಗೂ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ನಾಗರಿಕರು ಎಚ್ಚರದಿಂದ ಇರಬೇಕಿಗಿದೆ
ಜೂನ್ 10ರ ನಂತರ ಈ ಭಾಗದಲ್ಲಿ ಮಳೆ ಕ್ರಮೇಣ ಕಡಿಮೆಯಾಗಲಿದೆ. ಒಟ್ಟಾರೆ, ಮುಂದಿನ ಒಂದು ವಾರ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರಿಯಲಿದ್ದು, ನಾಗರಿಕರು ಎಚ್ಚರದಿಂದ ಇರಬೇಕಾಗಿದೆ.
ಇದನ್ನು ನೋಡಿ : AICC ಕಾರ್ಯದರ್ಶಿ SURAJ HEGDE ನಿಧನ – DCM PARAMESHWAR ತೀವ್ರ ಸಂತಾಪ




