Rain Alert : ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ, ಬೆಂಗಳೂರಲ್ಲೂ ವರುಣನ ಆರ್ಭಟ

ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ ಆಗಸ್ಟ್ 22ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮೀನುಗಾರರು ಕಡಲಿಗೆ ಇಳಿಯದಂತೆ ಮುನ್ನೆಚ್ಚರಿಕೆ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗಗಳಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರದಲ್ಲಿ ಗಾಳಿಯ ವೇಗ ಹೆಚ್ಚಿರುವ ಹಿನ್ನೆಲೆಯಲ್ಲಿ ಮೀನುಗಾರರು ಕಡಲಿಗೆ ಇಳಿಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಈ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ
ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ.
ಪರಿಣಾಮವಾಗಿ ನದಿಗಳು, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುವ ಸಾಧ್ಯತೆಯಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಆತಂಕವೂ ಇದೆ. ಈ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ.
READ THIS : ರಾಜ್ಯಾದ್ಯಂತ ಮಳೆ – 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಅಲರ್ಟ್

ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದ್ದು, ಕೆಲವೆಡೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.
ಬೆಂಗಳೂರಲ್ಲೂ ವರುಣನ ಆರ್ಭಟ
ಇನ್ನು ರಾಜಧಾನಿ ಬೆಂಗಳೂರು ನಗರದಲ್ಲೂ ಇಂದು ಮಧ್ಯಾಹ್ನದಿಂದಲೇ ಹಲವು ಪ್ರದೇಶಗಳಲ್ಲಿ ತುಂತುರು ಮಳೆ ದಾಖಲಾಗಿದೆ.
ರಾಜಾಜಿನಗರ, ಮಲ್ಲೇಶ್ವರ, ಯಶವಂತಪುರ ಸೇರಿದಂತೆ ಹಲವೆಡೆ ಮಳೆಯಾಗಿದ್ದು, ಸಂಜೆ ಹಾಗೂ ರಾತ್ರಿ ವೇಳೆಗೆ ನಗರದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ರೈತರಲ್ಲಿ ಸಂತಸ
ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಕೊಂಚ ತಗ್ಗಿದ್ದರೂ, ಇದೀಗ ಮತ್ತೆ ಮಳೆ ಚುರುಕುಗೊಂಡಿರುವುದು ರೈತರಲ್ಲಿ ಸಂತಸ ಮೂಡಿಸಿದೆ.
MUST WATCH : ಒಬ್ಬ ಉತ್ತಮ ವ್ಯಕ್ತಿಯನ್ನ ಕಳೆದುಕೊಂಡಿದ್ದೇವೆ – ಬಿ.ಸಿ. ನಾಗೇಶ್ ನೆನೆದು ವಿ. ಸೋಮಣ್ಣ ಕಂಬನಿ




