Rain Alert : ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್ – ಎಲ್ಲಿ ಎಷ್ಟು ಮಳೆಯಾಗಿದೆ?

Rain Alert : ರಾಜದಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದೆ.
ಮುಂದಿನ ಎರಡು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ವಿವಿಧ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ನೀಡಿದೆ.

ಯಾವ್ಯಾವ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್?
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದರೊಂದಿಗೆ ಮಲೆನಾಡಿನ ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೂ ಭಾರೀ ಮಳೆಯ ಮುನ್ನೆಚ್ಚರಿಕೆಯಾಗಿ ಆರೆಂಜ್ ಅಲರ್ಟ್ ಜಾರಿಯಾಗಿದೆ.
ಇನ್ನು ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಇದನ್ನು ಓದಿ : ಮಳೆ ಆರ್ಭಟ – ಈ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ!

ನಾಳೆ ಮಳೆ ಪ್ರಮಾಣ ಕಡಿಮೆ
ನಾಳೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲಿ ಎಷ್ಟು ಮಳೆ?
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಪ್ರಕಟಿಸಿರುವ ಮಾಹಿತಿಯಂತೆ, ಭಾನುವಾರ ಬೆಳಗ್ಗೆ 8.30ರಿಂದ ಸೋಮವಾರ ಬೆಳಗ್ಗೆ 7.30ರವರೆಗೆ 50 ಮಿ.ಮೀ.ಗಿಂತ ಹೆಚ್ಚು ಮಳೆ ಹಲವು ಪ್ರದೇಶಗಳಲ್ಲಿ ದಾಖಲಾಗಿದೆ.
ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನಿಲ್ಕೋಡ್ನಲ್ಲಿ 159 ಮಿ.ಮೀ., ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕರಿಮನೆದಲ್ಲಿ 150.5 ಮಿ.ಮೀ. ಹಾಗೂ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದಲ್ಲಿ 150 ಮಿ.ಮೀ. ಮಳೆಯಾಗಿದೆ.
ಇದನ್ನು ನೋಡಿ : ತುಮಕೂರಿನಲ್ಲಿ ಚಿಪ್ಪಿಗೆ ಫುಲ್ ಡಿಮ್ಯಾಂಡ್-ರೇಟ್ ಕೇಳಿದ್ರೆ ಶಾಕ್ ಆಗಿ ಹೋಗ್ತಿರಾ?





