Rain Alert : ರಾಜ್ಯಾದ್ಯಂತ ಮುಂದಿನ 24 ಗಂಟೆ ಭಾರಿ ಗಾಳಿ ಸಹಿತ ಮಳೆ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್!

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗುವ ಮುನ್ಸೂಚನೆ ದೊರೆತಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ, ಮಲೆನಾಡು ಹಾಗೂ ಒಳನಾಡಿನ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆ ಆಧರಿಸಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.
ಕರಾವಳಿಯಲ್ಲಿ ಗಾಳಿ ಸಹಿತ ಮಳೆ
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಇದರೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ.

ಉತ್ತರ ಒಳನಾಡಿನಲ್ಲೂ ಮಳೆ ಸಾಧ್ಯತೆ
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.
ಈ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಇದನ್ನು ಓದಿ : ಉತ್ತರ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಮಲೆನಾಡು, ದಕ್ಷಿಣ ಒಳನಾಡಿಗೂ ಮಳೆ
ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ
ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ.
ಈ ಪ್ರದೇಶಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ.
ನಗರದ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಇದನ್ನು ನೋಡಿ : ಗಂಡನ ಮನೆಯವರ ಕಿರುಕುಳಕ್ಕೆ ಮಹಿಳೆ ಸಾ* – ಗಂಡನ ಮನೆ ಮುಂದೆ ಪ್ರತಿಭಟಿಸಿ ಆಕ್ರೋಶ




